ಮಲಾಕಿಯ 3:9

ಇದರ ಮೂಲಕ ಶಪಿಸಲ್ಪಟ್ಟಿ; ನೀವು, ಹೌದು, ಈ ಸಮಸ್ತ ಜನಾಂಗವೇ ನನ್ನದನ್ನು ಕಳ್ಳತನ ಮಾಡಿದ್ದೀರಿ.

ಸಂದರ್ಭದೊಂದಿಗೆ ಓದಿ · ಮಲಾಕಿಯ 3

7ನಿಮ್ಮ ತಂದೆಗಳ ದಿವಸಗಳಿಂದಲೇ ನನ್ನ ನಿಯಮ ಗಳನ್ನು ಬಿಟ್ಟುಹೋಗಿದ್ದೀರಿ. ಅವುಗಳನ್ನು ಕೈಕೊಳ್ಳಲಿಲ್ಲ; ನನ್ನ ಬಳಿಗೆ ತಿರುಗಿಕೊಳ್ಳಿರಿ; ಆಗ ನಾನು ನಿಮ್ಮ ಬಳಿಗೆ ತಿರುಗಿಕೊಳ್ಳುವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ; ಆದರೆ ನೀವು--ಯಾವದರಲ್ಲಿ ತಿರುಗಿಕೊಳ್ಳೋಣ ಎಂದು ಹೇಳುತ್ತೀರಿ.

8ಮನುಷ್ಯನು ದೇವರದನ್ನು ಕಳ್ಳತನ ಮಾಡುವನೋ? ಆದರೆ ನೀವು ನನ್ನದನ್ನು ಕಳ್ಳತನ ಮಾಡಿದ್ದೀರಿ; ಆದರೆ ನೀವು--ಯಾವದರಲ್ಲಿ ನಿನ್ನದನ್ನು, ಕಳ್ಳತನ ಮಾಡಿದ್ದೇವೆಂದು ಅನ್ನುತ್ತೀರಿ? ದಶಮಭಾಗ ಮತ್ತು ಅರ್ಪಣೆಗಳನ್ನೇ.

9ಇದರ ಮೂಲಕ ಶಪಿಸಲ್ಪಟ್ಟಿ; ನೀವು, ಹೌದು, ಈ ಸಮಸ್ತ ಜನಾಂಗವೇ ನನ್ನದನ್ನು ಕಳ್ಳತನ ಮಾಡಿದ್ದೀರಿ.

10ನನ್ನ ಆಲಯದಲ್ಲಿ ಆಹಾರವಿರುವ ಹಾಗೆ ಹತ್ತನೇ ಪಾಲು ಗಳನ್ನೆಲ್ಲಾ ಬೊಕ್ಕಸದ ಮನೆಯಲ್ಲಿ ತನ್ನಿರಿ; ಇದರಿಂದ ನನ್ನನ್ನು ಪರೀಕ್ಷಿಸಿರಿ; ನಾನು ನಿಮಗೆ ಆಕಾಶದ ಕಿಟಕಿ ಗಳನ್ನು ತೆರೆದು ಸಾಕಾಗುವಷ್ಟಕ್ಕಿಂತ ಹೆಚ್ಚಾಗುವಷ್ಟು ಆಶೀರ್ವಾದ ನಿಮಗೆ ಸುರಿಸದಿರುವೆನೇ? ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.

11ಇದಲ್ಲದೆ ನಾನು ನಿಮ್ಮ ನಿಮಿತ್ತ ನುಂಗಿ ಬಿಡುವವನನ್ನು ಗದರಿಸುವೆನು; ಅವನು ನಿಮ್ಮ ಭೂಮಿಯ ಫಲವನ್ನು ಕೆಡಿಸನು; ಇಲ್ಲವೆ ನಿಮ್ಮ ದ್ರಾಕ್ಷೇಬಳ್ಳಿ ಹೊಲದಲ್ಲಿ ತನ್ನ ಫಲ ವನ್ನು ಕಾಲಕ್ಕೆ ಮುಂಚೆ ಉದುರಿಸಿಬಿಡುವದಿಲ್ಲವೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.

ಮಲಾಕಿಯ 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी