ಯೋಹಾನನು 15:18

ಲೋಕವು ನಿಮ್ಮನ್ನು ದ್ವೇಷಮಾಡಿದರೆ ನಿಮಗಿಂತ ಮೊದಲು ಅದು ನನ್ನನ್ನು ದ್ವೇಷಮಾಡಿದೆ ಎಂದು ನಿಮಗೆ ತಿಳಿದದೆ.

ಸಂದರ್ಭದೊಂದಿಗೆ ಓದಿ · ಯೋಹಾನನು 15

16ನೀವು ನನ್ನನ್ನು ಆರಿಸಿಕೊಂಡಿಲ್ಲ; ಆದರೆ ನಾನು ನಿಮ್ಮನ್ನು ಆರಿಸಿ ಕೊಂಡು, ನೀವು ಹೋಗಿ ಫಲಕೊಡುವಂತೆಯೂ ನಿಮ್ಮ ಫಲವು ನೆಲೆಗೊಂಡಿರುವಂತೆಯೂ ನಿಮ್ಮನ್ನು ನೇಮಿಸಿದ್ದೇನೆ. ಆದಕಾರಣ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಆತನು ಅದನ್ನು ನಿಮಗೆ ಕೊಡುವನು.

17ನೀವು ಒಬ್ಬರನ್ನೊಬ್ಬರು ಪ್ರೀತಿ ಮಾಡಬೇಕೆಂದು ನಾನು ಇವುಗಳನ್ನು ನಿಮಗೆ ಆಜ್ಞಾಪಿಸುತ್ತೇನೆ.

18ಲೋಕವು ನಿಮ್ಮನ್ನು ದ್ವೇಷಮಾಡಿದರೆ ನಿಮಗಿಂತ ಮೊದಲು ಅದು ನನ್ನನ್ನು ದ್ವೇಷಮಾಡಿದೆ ಎಂದು ನಿಮಗೆ ತಿಳಿದದೆ.

19ನೀವು ಲೋಕದವರಾಗಿದ್ದರೆ ಲೋಕವು ತನ್ನವರನ್ನು ಪ್ರೀತಿಸುತ್ತಿತ್ತು; ಆದರೆ ನೀವು ಲೋಕದವರಲ್ಲದೆ ಇರುವದರಿಂದಲೂ ನಾನು ಲೋಕದೊಳಗಿಂದ ನಿಮ್ಮನ್ನು ಆರಿಸಿಕೊಂಡದ್ದರಿಂದಲೂ ಲೋಕವು ನಿಮ್ಮನ್ನು ದ್ವೇಷಮಾಡುತ್ತದೆ.

20ತನ್ನ ದಣಿಗಿಂತ ಆಳು ದೊಡ್ಡವನಲ್ಲ ಎಂದು ನಾನು ನಿಮಗೆ ಹೇಳಿದ ಮಾತನ್ನು ಜ್ಞಾಪಕಮಾಡಿಕೊಳ್ಳಿರಿ; ಅವರು ನನ್ನನ್ನು ಹಿಂಸಿಸಿದರೆ ನಿಮ್ಮನ್ನು ಸಹ ಹಿಂಸಿಸುವರು. ಅವರು ನನ್ನ ಮಾತನ್ನು ಕೈ ಕೊಂಡಿದ್ದರೆ ನಿಮ್ಮ ಮಾತನ್ನು ಸಹ ಕೈಕೊಳ್ಳುವರು.

ಯೋಹಾನನು 15 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी