ಅದಕ್ಕೋಸ್ಕರ ನಾನು ಸಾರುವವನಾಗಿಯೂ ಅಪೊಸ್ತಲನಾಗಿಯೂ ಅನ್ಯಜನ ರಿಗೆ ಉಪದೇಶಕನಾಗಿಯೂ ನೇಮಿಸಲ್ಪಟ್ಟೆನು.
9ಆತನು ನಮ್ಮ ಕ್ರಿಯೆಗಳಿಗನುಸಾರವಾಗಿ ಅಲ್ಲ, ತನ್ನ ಸ್ವಂತ ಸಂಕಲ್ಪ ಮತ್ತು ಕೃಪೆಯ ಪ್ರಕಾರ ನಮ್ಮನ್ನು ರಕ್ಷಿಸಿ ಪರಿಶುದ್ಧವಾದ ಕರೆಯಿಂದ ನಮ್ಮನ್ನು ಕರೆದನು. ಆತನು ಜಗದುತ್ಪತ್ತಿಗೆ ಮುಂಚೆಯೇ ಆ ಕೃಪೆಯನ್ನು ಕ್ರಿಸ್ತ ಯೇಸುವಿನಲ್ಲಿ ನಮಗೆ ಅನುಗ್ರಹಿಸಿದನು.
10ಈಗ ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಪ್ರತ್ಯಕ್ಷತೆಯ ಮೂಲಕ ಅದನ್ನು ಪ್ರಕಾಶ ಪಡಿಸಿದ್ದಾನೆ. ಈತನು ಮರಣವನ್ನು ನಿವೃತ್ತಿ ಮಾಡಿ ಸುವಾರ್ತೆಯ ಮೂಲಕ ಜೀವವನ್ನೂ ನಿರ್ಲಯತ್ವ ವನ್ನೂ ಪ್ರಕಾಶಗೊಳಿಸಿದನು.
11ಅದಕ್ಕೋಸ್ಕರ ನಾನು ಸಾರುವವನಾಗಿಯೂ ಅಪೊಸ್ತಲನಾಗಿಯೂ ಅನ್ಯಜನ ರಿಗೆ ಉಪದೇಶಕನಾಗಿಯೂ ನೇಮಿಸಲ್ಪಟ್ಟೆನು.
12ಇದರ ನಿಮಿತ್ತದಿಂದಲೇ ಈ ಶ್ರಮೆಗಳನ್ನು ಅನುಭವಿಸುತ್ತಾ ಇದ್ದೇನೆ; ಆದರೂ ನಾನು ನಾಚಿಕೆಪಡುವದಿಲ್ಲ; ಯಾಕಂ ದರೆ ನಾನು ನಂಬಿರುವಾತನನ್ನು ಬಲ್ಲೆನು, ನಾನು ಆತನಿಗೆ ಒಪ್ಪಿಸಿದ್ದನ್ನು ಆತನು ಆ ದಿನಕ್ಕಾಗಿ ಕಾಪಾಡು ವದಕ್ಕೆ ಶಕ್ತನಾಗಿದ್ದಾನೆಂದೂ ದೃಢವಾಗಿ ನಂಬಿದ್ದೇನೆ.
13ನೀನು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯೂ ಪ್ರೀತಿಯೂ ಉಳ್ಳವನಾಗಿ ನನ್ನಿಂದ ಕೇಳಿದ ಸ್ವಸ್ಥ ವಾಕ್ಯಗಳ ಕ್ರಮವನ್ನು ಬಿಗಿಯಾಗಿ ಹಿಡಿದುಕೋ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ