ವಿಮೋಚನಕಾಂಡ 33:9

ತರುವಾಯ ಮೋಶೆಯು ಗುಡಾರದಲ್ಲಿ ಪ್ರವೇಶಿಸಿದಾಗ ಮೇಘಸ್ತಂಭವು ಇಳಿದು ಬಂದು ಗುಡಾರದ ಬಾಗಿಲಲ್ಲಿ ನಿಲ್ಲುತಿತ್ತು. ಕರ್ತನು ಮೋಶೆಯ ಸಂಗಡ ಮಾತನಾಡುವನು.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 33

7ಇದಲ್ಲದೆ ಮೋಶೆಯು ಗುಡಾರವನ್ನು ತೆಗೆದು ಪಾಳೆಯದ ಹೊರಗೆ ಪಾಳೆಯಕ್ಕೆ ದೂರವಾಗಿ ಹಾಕಿ ಅದಕ್ಕೆ ದೇವದರ್ಶನ ಗುಡಾರ ಎಂದು ಹೆಸರಿಟ್ಟನು. ತರುವಾಯ ಕರ್ತನನ್ನು ಹುಡುಕುವವರೆಲ್ಲಾ ಪಾಳೆಯದ ಹೊರಗೆ ಇರುವ ದೇವದರ್ಶನ ಗುಡಾರಕ್ಕೆ ಹೋದರು.

8ಇದಾದ ಮೇಲೆ ಮೋಶೆಯು ಹೊರಗೆ ಗುಡಾರದ ಬಳಿಗೆ ಹೋಗುವಾಗೆಲ್ಲಾ ಜನರೆಲ್ಲರು ಎದ್ದು ತಮ್ಮ ತಮ್ಮ ಗುಡಾರಗಳ ಬಾಗಿಲುಗಳಲ್ಲಿ ನಿಂತುಕೊಂಡು ಮೋಶೆಯು ಗುಡಾರದಲ್ಲಿ ಪ್ರವೇಶಿಸುವ ವರೆಗೆ ಅವನ ಹಿಂದೆ ನೋಡುತ್ತಿದ್ದರು.

9ತರುವಾಯ ಮೋಶೆಯು ಗುಡಾರದಲ್ಲಿ ಪ್ರವೇಶಿಸಿದಾಗ ಮೇಘಸ್ತಂಭವು ಇಳಿದು ಬಂದು ಗುಡಾರದ ಬಾಗಿಲಲ್ಲಿ ನಿಲ್ಲುತಿತ್ತು. ಕರ್ತನು ಮೋಶೆಯ ಸಂಗಡ ಮಾತನಾಡುವನು.

10ಜನ ರೆಲ್ಲರೂ ಗುಡಾರದ ಬಾಗಿಲಲ್ಲಿ ನಿಂತ ಮೇಘಸ್ತಂಭವನ್ನು ನೋಡಿ ತಮ್ಮ ತಮ್ಮ ಡೇರೆಗಳ ಬಾಗಿಲುಗಳಲ್ಲಿ ಎದ್ದು ನಿಂತು ಆರಾಧಿಸುತ್ತಿದ್ದರು.

11ಒಬ್ಬ ಮನುಷ್ಯನು ತನ್ನ ಸ್ನೇಹಿತನ ಸಂಗಡ ಮಾತನಾಡುವಂತೆ ಕರ್ತನು ಮೋಶೆಯ ಸಂಗಡ ಮುಖಾಮುಖಿಯಾಗಿ ಮಾತಾಡು ತ್ತಿದ್ದನು. ತರುವಾಯ ಅವನು ಪಾಳೆಯಕ್ಕೆ ಹಿಂತಿರಿಗಿ ಹೋದನು. ಆದರೆ ಅವನ ಸೇವಕನೂ ನೂನನ ಮಗನೂ ಆದ ಯೆಹೋಶುವ ಎಂಬ ಯೌವನಸ್ಥನು ಗುಡಾರವನ್ನು ಬಿಟ್ಟುಹೋಗಲಿಲ್ಲ.

ವಿಮೋಚನಕಾಂಡ 33 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी