೧ ಕೊರಿಂಥದವರಿಗೆ 8:6

ನಮಗಾದರೋ ಒಬ್ಬನೇ ದೇವರಿದ್ದಾನೆ; ಆತನು ತಂದೆಯೆಂಬಾತನೇ; ಆತನು ಸಮಸ್ತಕ್ಕೂ ಮೂಲ ಕಾರಣನು; ನಾವು ಆತನಲ್ಲಿ ಇದ್ದೇವೆ. ಕರ್ತನಾದ ಯೇಸು ಕ್ರಿಸ್ತನು ಒಬ್ಬನೇ; ಆತನ ಮುಖಾಂತರ ಸಮಸ್ತವೂ ಉಂಟಾಯಿತು; ನಾವು ಆತನ ಮುಖಾಂತರ ಉಂಟಾದೆವು.

ಸಂದರ್ಭದೊಂದಿಗೆ ಓದಿ · ೧ ಕೊರಿಂಥದವರಿಗೆ 8

4ವಿಗ್ರಹಗಳಿಗೆ ಸಮರ್ಪಣೆ ಮಾಡಿದವುಗಳನ್ನು ತಿನ್ನುವದರ ವಿಷ ಯದಲ್ಲಿ ನಾನು ಹೇಳುವದೇನಂದರೆ, ಜಗತ್ತಿನಲ್ಲಿ ವಿಗ್ರಹವು ಏನೂ ಅಲ್ಲವೆಂದೂ ಒಬ್ಬ ದೇವರಿದ್ದಾನೆ ಹೊರತು ಬೇರೆ ದೇವರಿಲ್ಲವೆಂದೂ ನಾವು ಬಲ್ಲೆವು.

5ಆಕಾಶದಲ್ಲಿಯಾಗಲೀ ಭೂಮಿಯಲ್ಲಾಗಲೀ ದೇವರು ಗಳೆಂದು ಕರೆಯಲ್ಪಟ್ಟವುಗಳು ಇದ್ದಾಗ್ಯೂ (ಅನೇಕ ದೇವರುಗಳು ಮತ್ತು ಅನೇಕ ಪ್ರಭುಗಳು ಇರುತ್ತಾರೆ.)

6ನಮಗಾದರೋ ಒಬ್ಬನೇ ದೇವರಿದ್ದಾನೆ; ಆತನು ತಂದೆಯೆಂಬಾತನೇ; ಆತನು ಸಮಸ್ತಕ್ಕೂ ಮೂಲ ಕಾರಣನು; ನಾವು ಆತನಲ್ಲಿ ಇದ್ದೇವೆ. ಕರ್ತನಾದ ಯೇಸು ಕ್ರಿಸ್ತನು ಒಬ್ಬನೇ; ಆತನ ಮುಖಾಂತರ ಸಮಸ್ತವೂ ಉಂಟಾಯಿತು; ನಾವು ಆತನ ಮುಖಾಂತರ ಉಂಟಾದೆವು.

7ಆದರೆ ಆ ಜ್ಞಾನವು ಎಲ್ಲರಲ್ಲಿಯೂ ಇಲ್ಲ. ಕೆಲವರು ಈವರೆಗೂ ವಿಗ್ರಹದ ಬಳಿಗೆ ಹೋಗುವ ರೂಢಿಯಲ್ಲಿದ್ದದರಿಂದ ತಾವು ತಿನ್ನುವ ಪದಾರ್ಥಗಳನ್ನು ವಿಗ್ರಹಗಳಿಗೆ ಸಮರ್ಪಣೆ ಮಾಡಿದ್ದೆಂದು ತಿನ್ನುತ್ತಾರೆ; ಹೀಗೆ ಅವರ ಮನಸ್ಸು ಬಲಹೀನವಾಗಿರುವದರಿಂದ ಅಶುದ್ಧವಾಗಿದೆ.

8ಆದರೆ ಆಹಾರವು ನಮ್ಮನ್ನು ದೇವರಿಗೆ ಮೆಚ್ಚಿಕೆಯಾದವರನ್ನಾಗಿ ಮಾಡಲಾರದು; ಯಾಕಂದರೆ ನಾವು ತಿಂದರೆ ನಮ ಗೇನೂ ಹೆಚ್ಚಾಗುವದಿಲ್ಲ; ಇಲ್ಲವೆ ನಾವು ತಿನ್ನದಿದ್ದರೆ ನಮಗೇನೂ ಕಡಿಮೆಯಿಲ್ಲ.

೧ ಕೊರಿಂಥದವರಿಗೆ 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी