ಯೆಹೆಜ್ಕೇಲನು 32:8

ಆಕಾಶದಲ್ಲಿ ಪ್ರಕಾಶಿ ಸುವ ಬೆಳಕುಗಳನ್ನು ನಿನ್ನ ನಿಮಿತ್ತವಾಗಿ ನಾನು ಕತ್ತಲು ಮಾಡುವೆನು; ಆ ಕತ್ತಲೆಯನ್ನು ನಿನ್ನ ದೇಶದ ಮೇಲೆ ಇಡುತ್ತೇನೆಂದು ದೇವರಾದ ಕರ್ತನು ಹೇಳುತ್ತಾನೆ.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 32

6ನಿನ್ನ ರಕ್ತ ಪ್ರವಾಹದಿಂದ ದೇಶವನ್ನು ಬೆಟ್ಟಗಳ ತನಕ ತೋಯಿಸು ವೆನು; ನದಿಗಳು ನಿನ್ನಿಂದ ತುಂಬುವವು.

7ಇದಲ್ಲದೆ, ನಾನು ನಿನ್ನನ್ನು ನಂದಿಸುವಾಗ ಆಕಾಶಕ್ಕೆ ಮುಸುಕುಹಾಕಿ ಅಲ್ಲಿನ ನಕ್ಷತ್ರಗಳನ್ನು ಕತ್ತಲಾಗ ಮಾಡಿ, ಸೂರ್ಯನನ್ನು ಮೋಡದಿಂದ ಮುಚ್ಚಿಬಿಡುವೆನು; ಚಂದ್ರನು ತನ್ನ ಬೆಳಕನ್ನು ಕೊಡದೆ ಇರುವನು.

8ಆಕಾಶದಲ್ಲಿ ಪ್ರಕಾಶಿ ಸುವ ಬೆಳಕುಗಳನ್ನು ನಿನ್ನ ನಿಮಿತ್ತವಾಗಿ ನಾನು ಕತ್ತಲು ಮಾಡುವೆನು; ಆ ಕತ್ತಲೆಯನ್ನು ನಿನ್ನ ದೇಶದ ಮೇಲೆ ಇಡುತ್ತೇನೆಂದು ದೇವರಾದ ಕರ್ತನು ಹೇಳುತ್ತಾನೆ.

9ಇದಲ್ಲದೆ ಜನಾಂಗಗಳೊಳಗೆ ನೀನು ಅರಿಯದ ದೇಶಗಳಲ್ಲಿ, ನಿನ್ನ ನಾಶನವನ್ನು ಪ್ರಸಿದ್ಧಿಪಡಿಸಿ, ಅನೇಕ ಜನಗಳ ಹೃದಯದಲ್ಲಿ ಗಲಿಬಿಲಿ ಎಬ್ಬಿಸುವೆನು.

10ಹೌದು, ನಾನು ಅನೇಕ ಜನರನ್ನು ನಿನ್ನ ವಿಷಯದಲ್ಲಿ ವಿಸ್ಮಯಗೊಳಿಸುವೆನು, ನಾನು ಅವರ ಮುಂದೆ ನನ್ನ ಕತ್ತಿಯನ್ನು ಬೀಸುವಾಗ ಅವರ ಅರಸರು ನಿನ್ನ ವಿಷಯದಲ್ಲಿ ಭಯಭ್ರಾಂತಿಗೊಳ್ಳುವರು. ನೀನು ಬೀಳುವ ಆ ದಿನದಲ್ಲಿ ಅವರು ಕ್ಷಣಕ್ಷಣಕ್ಕೆ ತಮ್ಮ ತಮ್ಮ ಪ್ರಾಣದ ಬಗ್ಗೆ ನಡುಗುವರು.

ಯೆಹೆಜ್ಕೇಲನು 32 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी