೨ ಪೂರ್ವಕಾಲವೃತ್ತಾಂತ 21:13

ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದು ಅಹಾಬನ ಮನೆಯ ವ್ಯಭಿಚಾರಿ ಗಳ ಹಾಗೆ ಯೆಹೂದದವರನ್ನೂ ಯೆರೂಸಲೇಮಿನ ನಿವಾಸಿಗಳನ್ನೂ ವ್ಯಭಿಚಾರ ಮಾಡಲು ಪ್ರೇರೇಪಿಸಿ ನಿನಗಿಂತ ಉತ್ತಮರಾಗಿರುವ ನಿನ್ನ ತಂದೆಯ ಮನೆ ಯವರಾದ ನಿನ್ನ ಸಹೋದರರನ್ನು ಕೊಂದುಹಾಕಿ ದ್ದರಿಂದ

ಸಂದರ್ಭದೊಂದಿಗೆ ಓದಿ · ೨ ಪೂರ್ವಕಾಲವೃತ್ತಾಂತ 21

11ಅವನು ಯೆಹೂದದ ಪರ್ವತಗಳಲ್ಲಿ ಉನ್ನತ ಸ್ಥಳಗಳನ್ನು ಮಾಡಿ ಯೆರೂಸಲೇಮಿನ ನಿವಾಸಿಗಳನ್ನು ವ್ಯಭಿಚಾರ ಮಾಡಲು ಪ್ರೇರೇಪಿಸಿ ಹಾಗೆಯೇ ಮಾಡಲು ಯೆಹೂ ದದವರನ್ನು ಬಲವಂತ ಮಾಡಿದನು.

12ಆದಕಾರಣ ಪ್ರವಾದಿಯಾದ ಎಲೀಯನಿಂದ ಅವನಿಗೆ ಒಂದು ಬರಹವು ಬಂತು. ಏನಂದರೆ--ನಿನ್ನ ತಂದೆಯಾದ ದಾವೀದನ ದೇವರಾದ ಕರ್ತನು ಹೀಗೆ ಹೇಳುತ್ತಾನೆನೀನು ನಿನ್ನ ತಂದೆಯಾದ ಯೆಹೋಷಾಫಾಟನ ಮಾರ್ಗ ಗಳಲ್ಲಿಯೂ ಯೆಹೂದದ ಅರಸನಾದ ಆಸನ ಮಾರ್ಗ ಗಳಲ್ಲಿಯೂ ನಡೆಯದೆ

13ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದು ಅಹಾಬನ ಮನೆಯ ವ್ಯಭಿಚಾರಿ ಗಳ ಹಾಗೆ ಯೆಹೂದದವರನ್ನೂ ಯೆರೂಸಲೇಮಿನ ನಿವಾಸಿಗಳನ್ನೂ ವ್ಯಭಿಚಾರ ಮಾಡಲು ಪ್ರೇರೇಪಿಸಿ ನಿನಗಿಂತ ಉತ್ತಮರಾಗಿರುವ ನಿನ್ನ ತಂದೆಯ ಮನೆ ಯವರಾದ ನಿನ್ನ ಸಹೋದರರನ್ನು ಕೊಂದುಹಾಕಿ ದ್ದರಿಂದ

14ಇಗೋ, ಕರ್ತನು ದೊಡ್ಡ ಬಾಧೆಯಿಂದ ನಿನ್ನ ಜನರನ್ನೂ ಮಕ್ಕಳನ್ನೂ ಹೆಂಡತಿಯರನ್ನೂ ಸಮಸ್ತ ಸ್ಥಿತಿಯನ್ನೂ ಬಾಧಿಸುತ್ತಾನೆ.

15ಇದಲ್ಲದೆ ದಿನದಿನಕ್ಕೆ ರೋಗ ಅನುಭವಿಸುವದರಿಂದ ನಿನ್ನ ಕರುಳುಗಳು ಹೊರಕ್ಕೆ ಹೊರಡುವ ವರೆಗೆ ನಿನ್ನ ಕರುಳುಗಳ ರೋಗದಿಂದ ನಿನಗೆ ಮಹಾರೋಗ ಉಂಟಾಗಿರುವದು ಎಂಬದೇ.

೨ ಪೂರ್ವಕಾಲವೃತ್ತಾಂತ 21 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी