ಅಪೊಸ್ತಲರ ಕೃತ್ಯಗಳು 13:45

ಆದರೆ ಯೆಹೂದ್ಯರು ಜನ ಸಮೂಹಗಳನ್ನು ನೋಡಿ ಹೊಟ್ಟೇಕಿಚ್ಚಿನಿಂದ ತುಂಬಿ ದವರಾಗಿ ಪೌಲನು ಹೇಳಿದವುಗಳನ್ನು ವಿರೋಧಿಸಿ ದೇವದೂಷಣೆ ಮಾಡುತ್ತಾ ಎದುರು ಮಾತನಾಡಿದರು.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 13

43ಸಭೆಯು ಮುಗಿದ ತರುವಾಯ ಯೆಹೂದ್ಯರಲ್ಲಿಯೂ ಯೆಹೂದ್ಯ ಮತಾವಲಂಬಿ ಗಳಲ್ಲಿಯೂ ಅನೇಕರು ಪೌಲ ಬಾರ್ನಬರನ್ನು ಹಿಂಬಾ ಲಿಸಿದರು. ಇವರು ಅವರ ಸಂಗಡ ಮಾತನಾಡಿ ದೇವರ ಕೃಪೆಯಲ್ಲಿ ನೆಲೆಗೊಂಡಿರಬೇಕೆಂದು ಅವರನ್ನು ಪ್ರೋತ್ಸಾಹಪಡಿಸಿದರು.

44ಮುಂದಿನ ಸಬ್ಬತ್‌ ದಿನದಲ್ಲಿ ಹೆಚ್ಚು ಕಡಿಮೆ ಪಟ್ಟಣದಲ್ಲಿದ್ದವರೆಲ್ಲಾ ದೇವರ ವಾಕ್ಯವನ್ನು ಕೇಳುವದಕ್ಕೆ ಕೂಡಿಬಂದರು.

45ಆದರೆ ಯೆಹೂದ್ಯರು ಜನ ಸಮೂಹಗಳನ್ನು ನೋಡಿ ಹೊಟ್ಟೇಕಿಚ್ಚಿನಿಂದ ತುಂಬಿ ದವರಾಗಿ ಪೌಲನು ಹೇಳಿದವುಗಳನ್ನು ವಿರೋಧಿಸಿ ದೇವದೂಷಣೆ ಮಾಡುತ್ತಾ ಎದುರು ಮಾತನಾಡಿದರು.

46ಆಗ ಪೌಲನೂ ಬಾರ್ನಬನೂ ಧೈರ್ಯದಿಂದ ಮಾತನಾಡಿ--ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವದು ಅವಶ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡದ್ದರಿಂದ ಇಗೋ, ನಾವು ಅನ್ಯಜನರ ಕಡೆಗೆ ಹೋಗುತ್ತೇವೆ.

47ಯಾಕಂ ದರೆ--ನೀನು ಲೋಕದ ಕಟ್ಟಕಡೆಯ ವರೆಗೆ ರಕ್ಷಣೆಗೆ ಕಾರಣವಾಗಿರುವಂತೆ ನಾನು ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ನೇಮಿಸಿದ್ದೇನೆ ಎಂದು ಹೇಳಿದ ಹಾಗೆ ಕರ್ತನು ನಮಗೆ ಅಪ್ಪಣೆ ಕೊಟ್ಟಿದ್ದಾನೆ.

ಅಪೊಸ್ತಲರ ಕೃತ್ಯಗಳು 13 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी