ನಿನ್ನ ದಿಕ್ಕಿಲ್ಲದ ಮಕ್ಕಳನ್ನು ಬಿಡು; ನಾನೇ ರಕ್ಷಿಸುವೆನು; ನಿನ್ನ ವಿಧವೆಯರು ನನ್ನಲ್ಲಿ ನಂಬಿಕೆ ಇಡಲಿ.
9ದ್ರಾಕ್ಷೇ ಕೂಡಿಸುವವರು ನಿನ್ನ ಬಳಿಗೆ ಬಂದಿದ್ದರೆ ಹಕ್ಕಲನ್ನಾದರೂ ಉಳಿಸರೇ? ರಾತ್ರಿಯಲ್ಲಿ ಕಳ್ಳರು ಬಂದಿದ್ದರೆ ತಮಗೆ ಸಾಕಾಗುವಷ್ಟು ಕೆಡಿಸುವವರಲ್ಲವೇ?
10ಆದರೆ ನಾನು ಏಸಾವನನ್ನು ಬರಿದುಮಾಡಿದ್ದೇನೆ; ಅದರ ರಹಸ್ಯ ಸ್ಥಳಗಳನ್ನು ತೆರೆದಿದ್ದೇನೆ; ಅವನು ತನ್ನನ್ನು ತಾನೇ ಅಡಗಿಸಿಕೊಳ್ಳಲಾರನು; ಅವನ ಸಂತಾನವು ಹಾಳಾಯಿತು; ಅವನ ಸಹೋದರರೂ ನೆರೆಯವರೂ ಅವನೂ ಇಲ್ಲವಾದರು.
11ನಿನ್ನ ದಿಕ್ಕಿಲ್ಲದ ಮಕ್ಕಳನ್ನು ಬಿಡು; ನಾನೇ ರಕ್ಷಿಸುವೆನು; ನಿನ್ನ ವಿಧವೆಯರು ನನ್ನಲ್ಲಿ ನಂಬಿಕೆ ಇಡಲಿ.
12ಕರ್ತನು ಹೀಗೆ ಹೇಳು ತ್ತಾನೆ--ಇಗೋ ಪಾತ್ರೆಯಲ್ಲಿ ಕುಡಿಯುವದಕ್ಕೆ ಯಾರಿಗೆ ನ್ಯಾಯತೀರ್ವಿಕೆ ಆಗಲಿಲ್ಲವೋ? ಅವರು ಸಹ ಕುಡಿದಿದ್ದಾರೆ; ಹಾಗಾದರೆ ನೀನು ಶುದ್ಧವಾಗಿ ಅಪರಾಧ ವಿಲ್ಲದೆ ಇರುವಿಯೋ? ಅಪರಾಧವಿಲ್ಲದೆ ಇರುವದಿಲ್ಲ ನಿಶ್ಚಯವಾಗಿ ಕುಡಿಯುವಿ.
13ಬೊಚ್ರವು ಹಾಳೂ ನಿಂದೆಯೂ ಅಡವಿಯೂ ಶಾಪವೂ ಆಗುವದೆಂದು ಅದರ ಪಟ್ಟಣಗಳೆಲ್ಲಾ ಎಂದೆಂದಿಗೂ ಅಡವಿ ಸ್ಥಳಗಳಾ ಗುವವೆಂದೂ ನನ್ನ ಮೇಲೆ ಪ್ರಮಾಣ ಮಾಡಿಕೊಂಡಿದ್ದೇನೆಂದು ಕರ್ತನು ಅನ್ನುತ್ತಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ