ನೀನು ಸಹ ಅವನ ವಿಷಯದಲ್ಲಿ ಎಚ್ಚರಿಕೆಯಾಗಿರು; ಯಾಕಂದರೆ ಅವನು ನಮ್ಮ ಮಾತುಗಳನ್ನು ಬಹಳ ವಾಗಿ ಎದುರಿಸಿದನು.
13ತ್ರೋವ ದಲ್ಲಿ ನಾನು ಕರ್ಪನ ಬಳಿಯಲ್ಲಿ ಬಿಟ್ಟುಬಂದ ಮೇಲಂಗಿ ಯನ್ನೂ ಪುಸ್ತಕಗಳನ್ನೂ ಮುಖ್ಯವಾಗಿ ಚರ್ಮದ ಕಾಗದ ಗಳನ್ನೂ ನೀನು ಬರುವಾಗ ತೆಗೆದುಕೊಂಡು ಬಾ.
14ಕಂಚುಗಾರನಾದ ಅಲೆಕ್ಸಾಂದ್ರನು ನನಗೆ ಬಹಳ ಕೇಡುಮಾಡಿದನು; ಕರ್ತನು ಅವನ ಕೃತ್ಯಗಳಿಗೆ ಸರಿ ಯಾಗಿ ಅವನಿಗೆ ಪ್ರತಿಫಲವನ್ನು ಕೊಡುವನು.
15ನೀನು ಸಹ ಅವನ ವಿಷಯದಲ್ಲಿ ಎಚ್ಚರಿಕೆಯಾಗಿರು; ಯಾಕಂದರೆ ಅವನು ನಮ್ಮ ಮಾತುಗಳನ್ನು ಬಹಳ ವಾಗಿ ಎದುರಿಸಿದನು.
16ನಾನು ಮೊದಲನೆಯ ಸಾರಿ ಪ್ರತಿವಾದ ಮಾಡಿದಾಗ ಯಾರೂ ನನ್ನೊಂದಿಗೆ ನಿಲ್ಲಲಿಲ್ಲ. ಎಲ್ಲರೂ ನನ್ನನ್ನು ತೊರೆದುಬಿಟ್ಟರು; ಇದು ಅವರ ಲೆಕ್ಕಕ್ಕೆ ಸೇರಿಸಲ್ಪಡದೆ ಇರಲಿ ಎಂದು ನಾನು ದೇವರನ್ನು ಪ್ರಾರ್ಥಿಸುತ್ತೇನೆ.
17ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸಾರಲ್ಪಡುವದು ಸಂಪೂರ್ಣವಾಗಿ ಗ್ರಹಿಕೆ ಯಾಗುವಂತೆಯೂ ಅನ್ಯಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು; ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ