ಅವನ ತಂದೆಯು ಎಂದಾದರೂ--ನೀನು ಯಾಕೆ ಹೀಗೆ ಮಾಡಿದಿ ಎಂದು ಹೇಳಿ ಅವನನ್ನು ಗದರಿಸಲಿಲ್ಲ. ಇದಲ್ಲದೆ ಅವನು ಬಹು ರೂಪವಂತನಾಗಿದ್ದನು.
4ಈ ಸೌಂದರ್ಯವತಿಯಾದ ಹುಡುಗಿಯು ಅರಸನನ್ನು ಆದರಿಸಿ ಅವನನ್ನು ಸೇವಿ ಸುತ್ತಾ ಇದ್ದಳು; ಆದರೆ ಅರಸನು ಅವಳನ್ನು ಅರಿಯದೆ ಇದ್ದನು.
5ಆಗ ಹಗ್ಗೀತಳ ಮಗನಾದ ಅದೋನೀಯನು ತನ್ನನ್ನು ಹೆಚ್ಚಿಸಿಕೊಂಡು--ನಾನೇ ಅರಸನಾಗಿರಬೇಕು ಅಂದುಕೊಂಡು ತನಗೋಸ್ಕರ ರಥಗಳನ್ನೂ ರಾಹುತ ರನ್ನೂ ತನ್ನ ಮುಂದೆ ಓಡುವದಕ್ಕೆ ಐವತ್ತು ಮಂದಿ ಮನುಷ್ಯರನ್ನೂ ಸಿದ್ಧಮಾಡಿದನು.
6ಅವನ ತಂದೆಯು ಎಂದಾದರೂ--ನೀನು ಯಾಕೆ ಹೀಗೆ ಮಾಡಿದಿ ಎಂದು ಹೇಳಿ ಅವನನ್ನು ಗದರಿಸಲಿಲ್ಲ. ಇದಲ್ಲದೆ ಅವನು ಬಹು ರೂಪವಂತನಾಗಿದ್ದನು.
7ಅಬ್ಷಾಲೋಮನ ತರು ವಾಯ ಅವನ ತಾಯಿ ಅವನನ್ನು ಹೆತ್ತಳು. ಅವನು ಚೆರೂಯಳ ಮಗನಾದ ಯೋವಾಬನ ಸಂಗಡಲೂ ಯಾಜಕನಾದ ಎಬ್ಯಾತಾರನ ಸಂಗಡಲೂ ಮಾತನಾ ಡಿದನು; ಅವರು ಅದೋನೀಯನನ್ನು ಹಿಂಬಾಲಿಸಿ ಅವನಿಗೆ ಸಹಾಯಕರಾಗಿದ್ದರು.
8ಆದರೆ ಯಾಜಕ ನಾದ ಚಾದೋಕನೂ ಯೆಹೋಯಾದಾವನ ಮಗ ನಾದ ಬೆನಾಯನೂ ಪ್ರವಾದಿಯಾದ ನಾತಾನನೂ ಶಿಮ್ಮಿಯೂ ರೇಗಿಯೂ ದಾವೀದನ ಪರಾಕ್ರಮ ಶಾಲಿಗಳೂ ಅದೋನೀಯನ ಸಂಗಡ ಹೋಗಲಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ