೨ ಪೂರ್ವಕಾಲವೃತ್ತಾಂತ 24:18

ಅವರು ತಮ್ಮ ಪಿತೃಗಳ ದೇವರಾದ ಕರ್ತನ ಆಲಯವನ್ನು ಬಿಟ್ಟು ತೋಪುಗಳನ್ನೂ ವಿಗ್ರಹಗಳನ್ನೂ ಸೇವಿಸಿದರು. ಆದಕಾರಣ ಅವರ ಈ ಅಪರಾಧದ ನಿಮಿತ್ತ ಯೆಹೂದ ಮತ್ತು ಯೆರೂಸಲೇಮಿನ ಮೇಲೆ ರೌದ್ರ ಬಂತು.

ಸಂದರ್ಭದೊಂದಿಗೆ ಓದಿ · ೨ ಪೂರ್ವಕಾಲವೃತ್ತಾಂತ 24

16ಅವನು ದೇವರಿಗೋಸ್ಕರವಾಗಿಯೂ ಆತನ ಆಲಯಕ್ಕೋಸ್ಕರ ವಾಗಿಯೂ ಇಸ್ರಾಯೇಲಿನಲ್ಲಿ ಒಳ್ಳೇದನ್ನು ಮಾಡಿ ದ್ದದ್ದರಿಂದ ಅವರು ಅವನನ್ನು ದಾವೀದನ ಪಟ್ಟಣ ದಲ್ಲಿ ಅರಸುಗಳ ಬಳಿಯಲ್ಲಿ ಹೂಣಿಟ್ಟರು.

17ಆದರೆ ಯೆಹೋಯಾದನು ಸತ್ತತರುವಾಯ ಯೆಹೂದದ ಪ್ರಧಾನರು ಬಂದು ಅರಸನಿಗೆ ಅಡ್ಡ ಬಿದ್ದರು. ಆಗ ಅರಸನು ಅವರ ಮಾತನ್ನು ಕೇಳಿದನು.

18ಅವರು ತಮ್ಮ ಪಿತೃಗಳ ದೇವರಾದ ಕರ್ತನ ಆಲಯವನ್ನು ಬಿಟ್ಟು ತೋಪುಗಳನ್ನೂ ವಿಗ್ರಹಗಳನ್ನೂ ಸೇವಿಸಿದರು. ಆದಕಾರಣ ಅವರ ಈ ಅಪರಾಧದ ನಿಮಿತ್ತ ಯೆಹೂದ ಮತ್ತು ಯೆರೂಸಲೇಮಿನ ಮೇಲೆ ರೌದ್ರ ಬಂತು.

19ಆದಾಗ್ಯೂ ಕರ್ತನು ತನ್ನ ಕಡೆಗೆ ಅವರನ್ನು ತಿರುಗಿಸುವದಕ್ಕೆ ಪ್ರವಾದಿಗಳನ್ನು ಅವರ ಬಳಿಗೆ ಕಳುಹಿಸಿದನು; ಇವರು ಅವರಿಗೆ ಸಾಕ್ಷಿಯಾಗಿ ಹೇಳಿದರು; ಆದರೆ ಅವರು ಕಿವಿಗೊಡದೆ ಹೋದರು.

20ಆಗ ದೇವರ ಆತ್ಮನು ಯಾಜಕನಾಗಿ ರುವ ಯೆಹೋಯಾದನ ಮಗನಾದ ಜೆಕರ್ಯನ ಮೇಲೆ ಬಂದನು. ಅವನು ಜನರೊಳಗೆ ಎತ್ತರವಾದ ಸ್ಥಳದಲ್ಲಿ ನಿಂತು ಅವರಿಗೆ--ನೀವು ವೃದ್ಧಿಹೊಂದ ಕೂಡದ ಹಾಗೆ ಕರ್ತನ ಆಜ್ಞೆಗಳನ್ನು ವಿಾರುವದೇನು? ನೀವು ಕರ್ತನನ್ನು ಬಿಟ್ಟದ್ದರಿಂದ ಆತನು ನಿಮ್ಮನ್ನು ಬಿಟ್ಟಿದ್ದಾನೆಂದು ಕರ್ತನು ಹೇಳುತ್ತಾನೆ ಅಂದನು.

೨ ಪೂರ್ವಕಾಲವೃತ್ತಾಂತ 24 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी