ಯಾಕೋಬನು 5:9

ಸಹೋದರರೇ, ನೀವು ಒಬ್ಬರನ್ನೊಬ್ಬರು ದ್ವೇಷಿಸಬೇಡಿರಿ; ನ್ಯಾಯವಿಚಾರಣೆಗೆ ಗುರಿಯಾದೀರಿ. ಅಗೋ, ನ್ಯಾಯಾಧಿಪತಿಯು ಬಾಗಲಿನ ಮುಂದೆಯೇ ನಿಂತಿದ್ದಾನೆ.

ಸಂದರ್ಭದೊಂದಿಗೆ ಓದಿ · ಯಾಕೋಬನು 5

7ಸಹೋದರರೇ, ಕರ್ತನು ಬರುವ ತನಕ ದೀರ್ಘ ಶಾಂತಿಯಿಂದಿರ್ರಿ. ವ್ಯವಸಾಯಗಾರನನ್ನು ನೋಡಿರಿ; ಅವನು ಭೂಮಿಯ ಅಮೂಲ್ಯವಾದ ಫಲಕ್ಕಾಗಿ ಕಾದಿದ್ದು ಮುಂಗಾರು ಹಿಂಗಾರು ಮಳೆಗಳು ಬರುವ ತನಕ ದೀರ್ಘಶಾಂತಿಯಿಂದಿರುವನು.

8ನೀವೂ ದೀರ್ಘಶಾಂತಿಯಿಂದಿರ್ರಿ; ನಿಮ್ಮ ಹೃದಯಗಳನ್ನು ದೃಢಪಡಿಸಿಕೊಳ್ಳಿರಿ, ಯಾಕಂದರೆ ಕರ್ತನ ಪ್ರತ್ಯ ಕ್ಷತೆಯು ಹತ್ತಿರವಾಯಿತು.

9ಸಹೋದರರೇ, ನೀವು ಒಬ್ಬರನ್ನೊಬ್ಬರು ದ್ವೇಷಿಸಬೇಡಿರಿ; ನ್ಯಾಯವಿಚಾರಣೆಗೆ ಗುರಿಯಾದೀರಿ. ಅಗೋ, ನ್ಯಾಯಾಧಿಪತಿಯು ಬಾಗಲಿನ ಮುಂದೆಯೇ ನಿಂತಿದ್ದಾನೆ.

10ನನ್ನ ಸಹೋದರರೇ, ಬಾಧೆಯನ್ನು ತಾಳ್ಮೆಯಿಂದ ಸಹಿಸಿ ಕೊಳ್ಳುವ ವಿಷಯದಲ್ಲಿ ಕರ್ತನ ಹೆಸರಿನಿಂದ ಮಾತ ನಾಡಿದ ಪ್ರವಾದಿಗಳನ್ನೇ ಮಾದರಿ ಮಾಡಿಕೊಳ್ಳಿರಿ.

11ಇಗೋ, ತಾಳಿಕೊಳ್ಳುವವರನ್ನು ಧನ್ಯರೆಂದು ನಾವು ಎಣಿಸುತ್ತೇವಲ್ಲವೇ. ನೀವು ಯೋಬನಲ್ಲಿದ್ದ ತಾಳ್ಮೆಯ ವಿಷಯವಾಗಿ ಕೇಳಿ ಕರ್ತನು ಅವನಿಗೆ ಅಂತ್ಯದಲ್ಲಿ ಮಾಡಿದ್ದನ್ನು ನೋಡಿ ಕರ್ತನು ಬಹಳ ಕರುಣೆಯುಳ್ಳ ವನೂ ದಯಾಳುವೂ ಆಗಿದ್ದಾನೆಂದು ತಿಳಿದಿದ್ದೀರಷ್ಟೆ.

ಯಾಕೋಬನು 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी