ನ್ಯಾಯಸ್ಥಾಪಕರು 2:12

ತಮ್ಮ ತಂದೆಗಳನ್ನು ಐಗುಪ್ತದಿಂದ ಹೊರಡಮಾಡಿದ ತಮ್ಮ ದೇವರಾದ ಕರ್ತನನ್ನು ಬಿಟ್ಟು ತಮ್ಮ ಸುತ್ತಲಿರುವ ಜನಗಳ ಅನ್ಯ ದೇವರುಗಳ ಹಿಂದೆಹೋಗಿ ಅವುಗಳಿಗೆ ಅಡ್ಡಬಿದ್ದು ಕರ್ತನಿಗೆ ಕೋಪವನ್ನೆಬ್ಬಿಸಿದರು.

ಸಂದರ್ಭದೊಂದಿಗೆ ಓದಿ · ನ್ಯಾಯಸ್ಥಾಪಕರು 2

10ಆ ಸಂತತಿಯವರೆಲ್ಲರೂ ತಮ್ಮ ತಂದೆಗಳ ಬಳಿಯಲ್ಲಿ ಕೂಡಿಸಿಕೊಳ್ಳಲ್ಪಟ್ಟರು. ಅವರ ತರುವಾಯ ಕರ್ತನನ್ನೂ ಇಸ್ರಾಯೇಲ್ಯರಿಗೋಸ್ಕರ ಮಾಡಿದ ಆತನ ಕಾರ್ಯ ಗಳನ್ನೂ ಅರಿಯದೆ ಇರುವ ಮತ್ತೊಂದು ಸಂತತಿ ಎದ್ದಿತು.

11ಇಸ್ರಾಯೇಲ್‌ ಮಕ್ಕಳು ಕರ್ತನ ಮುಂದೆ ಕೆಟ್ಟತನ ಮಾಡಿ ಬಾಳನನ್ನು ಸೇವಿಸಿ

12ತಮ್ಮ ತಂದೆಗಳನ್ನು ಐಗುಪ್ತದಿಂದ ಹೊರಡಮಾಡಿದ ತಮ್ಮ ದೇವರಾದ ಕರ್ತನನ್ನು ಬಿಟ್ಟು ತಮ್ಮ ಸುತ್ತಲಿರುವ ಜನಗಳ ಅನ್ಯ ದೇವರುಗಳ ಹಿಂದೆಹೋಗಿ ಅವುಗಳಿಗೆ ಅಡ್ಡಬಿದ್ದು ಕರ್ತನಿಗೆ ಕೋಪವನ್ನೆಬ್ಬಿಸಿದರು.

13ಅವರು ಕರ್ತನನ್ನು ಬಿಟ್ಟು ಬಾಳನನ್ನೂ ಅಷ್ಟೋರೆತನ್ನೂ ಸೇವಿಸಿದರು.

14ಆದದರಿಂದ ಕರ್ತನು ಇಸ್ರಾಯೇಲಿಗೆ ವಿರೋಧ ವಾಗಿ ಉರಿಗೊಂಡು ಅವರನ್ನು ಕೊಳ್ಳೆಹೊಡೆಯುವ ಕೊಳ್ಳೆಗಾರರ ಕೈಯಲ್ಲಿ ಒಪ್ಪಿಸಿಕೊಟ್ಟನು. ತರುವಾಯ ಅವರು ತಮ್ಮ ಶತ್ರುಗಳಿಗೆ ಎದುರಾಗಿ ನಿಲ್ಲದ ಹಾಗೆ ಅವರ ಸುತ್ತಲಿರುವ ಅವರ ಶತ್ರುಗಳ ಕೈಗೆ ಅವರನ್ನು ಮಾರಿಬಿಟ್ಟನು.

ನ್ಯಾಯಸ್ಥಾಪಕರು 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी