ಮತ್ತಾಯನು 18:27

ಆ ಸೇವಕನ ಧಣಿಯು ಅವನ ಮೇಲೆ ಕನಿಕರಪಟ್ಟು ಅವನನ್ನು ಬಿಡಿಸಿ ಅವನ ಸಾಲವನ್ನೆಲ್ಲಾ ಬಿಟ್ಟು ಬಿಟ್ಟನು.

ಸಂದರ್ಭದೊಂದಿಗೆ ಓದಿ · ಮತ್ತಾಯನು 18

25ಆದರೆ ಕೊಡುವದಕ್ಕೆ ಅವನಿಗೆ ಏನೂ ಇಲ್ಲದ್ದರಿಂದ ಅವನನ್ನೂ ಅವನ ಹೆಂಡತಿಯನ್ನೂ ಮಕ್ಕಳನ್ನೂ ಅವನಿಗಿದ್ದದ್ದೆಲ್ಲವನ್ನೂ ಮಾರಿ ಸಾಲ ತೀರಿಸಬೇಕೆಂದು ಅವನ ಯಜಮಾನನು ಅಪ್ಪಣೆ ಕೊಟ್ಟನು.

26ಆಗ ಆ ಸೇವಕನು ನೆಲಕ್ಕೆ ಬಿದ್ದು ಅವನನ್ನು ವಂದಿಸಿ--ಧಣಿಯೇ, ನನ್ನನ್ನು ತಾಳಿಕೋ; ನಾನು ಎಲ್ಲವನ್ನು ನಿನಗೆ ಸಲ್ಲಿಸುವೆನು ಎಂದು ಹೇಳಿದನು.

27ಆ ಸೇವಕನ ಧಣಿಯು ಅವನ ಮೇಲೆ ಕನಿಕರಪಟ್ಟು ಅವನನ್ನು ಬಿಡಿಸಿ ಅವನ ಸಾಲವನ್ನೆಲ್ಲಾ ಬಿಟ್ಟು ಬಿಟ್ಟನು.

28ಆದರೆ ಅದೇ ಸೇವಕನು ಹೊರಗೆ ಹೋಗಿ ತನಗೆ ನೂರು ದೇನಾರುಗಳನ್ನು ಸಾಲ ಕೊಡಬೇಕಾಗಿದ್ದ ತನ್ನ ಜೊತೆ ಸೇವಕರಲ್ಲಿ ಒಬ್ಬನನ್ನು ಕಂಡು ಅವನನ್ನು ಹಿಡಿದು ಕುತ್ತಿಗೆ ಹಿಸುಕಿ--ನನ್ನ ಸಾಲವನ್ನು ತೀರಿಸು ಅಂದನು.

29ಆಗ ಅವನ ಜೊತೇ ಸೇವಕನು ಅವನ ಪಾದಕ್ಕೆ ಬಿದ್ದು ಅವನಿಗೆ--ನನ್ನನ್ನು ತಾಳಿಕೋ; ನಾನು ನಿನ್ನದನ್ನೆಲ್ಲಾ ತೀರಿಸುತ್ತೇನೆ ಎಂದು ಅವನನ್ನು ಬೇಡಿಕೊಂಡನು.

ಮತ್ತಾಯನು 18 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी