ಸುವಾರ್ತೆಯು ಮೊದಲು ಎಲ್ಲಾ ಜನಾಂಗಗಳಲ್ಲಿ ಸಾರಲ್ಪಡುವದು ಅಗತ್ಯವಾಗಿದೆ.
8ಯಾಕಂದರೆ ಜನಾಂಗಕ್ಕೆ ವಿರೋಧವಾಗಿ ಜನಾಂಗವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು; ಮತ್ತು ನಾನಾ ಕಡೆಗಳಲ್ಲಿ ಭೂಕಂಪಗಳಾಗುವವು. ಇದಲ್ಲದೆ ಬರ ಗಾಲಗಳು ಕಳವಳಗಳು ಉಂಟಾಗುವವು; ಇವು ಸಂಕಟಗಳ ಪ್ರಾರಂಭವಾಗಿವೆ.
9ಆದರೆ ನೀವು ನಿಮ್ಮ ವಿಷಯದಲ್ಲಿ ಎಚ್ಚರಿಕೆ ತೆಗೆದುಕೊಳ್ಳಿರಿ; ಯಾಕಂದರೆ ಅವರು ನಿಮ್ಮನ್ನು ನ್ಯಾಯವಿಚಾರಣೆಯ ಸಭೆಗಳಿಗೆ ಒಪ್ಪಿಸುವರು; ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು; ಅವರಿಗೆ ವಿರೋಧವಾಗಿ ನನ್ನ ನಿಮಿತ್ತ ಅಧಿಕಾರಿಗಳ ಮತ್ತು ಅರಸುಗಳ ಮುಂದೆ ನೀವು ತರಲ್ಪಡುವಿರಿ.
10ಸುವಾರ್ತೆಯು ಮೊದಲು ಎಲ್ಲಾ ಜನಾಂಗಗಳಲ್ಲಿ ಸಾರಲ್ಪಡುವದು ಅಗತ್ಯವಾಗಿದೆ.
11ಆದರೆ ಅವರು ನಿಮ್ಮನ್ನು ಒಪ್ಪಿಸುವದಕ್ಕಾಗಿ ತಕ್ಕೊಂಡು ಹೋಗುವಾಗ ನೀವು ಏನು ಮಾತನಾಡಬೇಕೆಂಬದನ್ನು ಮುಂಚಿತವಾಗಿ ಚಿಂತಿಸಬೇಡಿರಿ, ಆಲೋಚಿಸಲೂ ಬೇಡಿರಿ; ಆದರೆ ಆ ಗಳಿಗೆಯಲ್ಲಿ ನಿಮಗೆ ಯಾವದು ಕೊಡಲ್ಪಡುವದೋ ಅದನ್ನೇ ಮಾತನಾಡಿರಿ; ಯಾಕಂ ದರೆ ಮಾತನಾಡುವವರು ನೀವಲ್ಲ, ಆದರೆ ಪರಿಶು
12ಆಗ ಸಹೋದರನು ಸಹೋದರನನ್ನೂ ತಂದೆಯು ಮಗನನ್ನೂ ಮರಣಕ್ಕೆ ಒಪ್ಪಿಸುವರು; ಮಕ್ಕಳು ತಮ್ಮ ತಂದೆತಾಯಿಗಳಿಗೆ ವಿರೋಧವಾಗಿ ಎದ್ದು ಅವ ರನ್ನು ಕೊಲ್ಲಿಸುವದಕ್ಕೆ ಕಾರಣರಾಗುವರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ