ಪ್ರಸಂಗಿ 3:15

ಇದ್ದದ್ದು ಈಗ ಇದೆ, ಇರುವದು ಆಗಲೇ ಇತ್ತು; ಗತಿಸಿಹೋದದ್ದನ್ನು ದೇವರು ಕೇಳುತ್ತಾನೆ.

ಸಂದರ್ಭದೊಂದಿಗೆ ಓದಿ · ಪ್ರಸಂಗಿ 3

13ಪ್ರತಿ ಯೊಬ್ಬನು ತಿಂದು, ಕುಡಿದು, ತನ್ನ ಎಲ್ಲಾ ಪ್ರಯಾಸದ ಮೇಲನ್ನು ಅನುಭವಿಸುವದು ದೇವರ ದಾನದಿಂದಲೇ.

14ದೇವರು ಮಾಡುವದೆಲ್ಲವು ಶಾಶ್ವತವಾಗಿರುವದೆಂದು ನಾನು ಬಲ್ಲೆನು; ಅದಕ್ಕೆ ಯಾವದನ್ನೂ ಸೇರಿಸಬಾರದು, ಇಲ್ಲವೆ ಅದರಿಂದ ಯಾವದನ್ನೂ ತೆಗೆಯಬಾರದು; ಮನುಷ್ಯರು ಆತನ ಎದುರಿನಲ್ಲಿ ಭಯಪಡುವಂತೆ ದೇವರು ಅದನ್ನು ಮಾಡುತ್ತಾನೆ.

15ಇದ್ದದ್ದು ಈಗ ಇದೆ, ಇರುವದು ಆಗಲೇ ಇತ್ತು; ಗತಿಸಿಹೋದದ್ದನ್ನು ದೇವರು ಕೇಳುತ್ತಾನೆ.

16ಕೆಟ್ಟದ್ದು ಇತ್ತೆಂದು ಸೂರ್ಯನ ಕೆಳಗೆ ನ್ಯಾಯ ತೀರ್ಪಿನ ಸ್ಥಳವನ್ನು ಮತ್ತು ದುಷ್ಕೃತ್ಯ ಇದೆಯೆಂದು ನೀತಿಯ ಸ್ಥಾನವನ್ನು ನಾನು ಕಂಡೆನು.

17ನಾನು ನನ್ನ ಹೃದಯದಲ್ಲಿ -- ನೀತಿವಂತರನ್ನೂ ದುಷ್ಟರನ್ನೂ ದೇವರು ತೀರ್ಪುಮಾಡುವನು; ಪ್ರತಿಯೊಂದು ಉದ್ದೇ ಶಕ್ಕೂ ಪ್ರತಿಯೊಂದು ಕೆಲಸಕ್ಕೂ ಸಮಯವಿದೆ ಎಂದು ಅಂದುಕೊಂಡೆನು.

ಪ್ರಸಂಗಿ 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी