೨ ಪೂರ್ವಕಾಲವೃತ್ತಾಂತ 7:5

ಅರಸನಾದ ಸೊಲೊ ಮೋನನು ಇಪ್ಪತ್ತೆರಡು ಸಾವಿರ ಎತ್ತುಗಳನ್ನೂ ಲಕ್ಷದ ಇಪ್ಪತ್ತುಸಾವಿರ ಕುರಿಗಳನ್ನೂ ಬಲಿಯಾಗಿ ಅರ್ಪಿಸಿ ದನು. ಹೀಗೆಯೇ ಅರಸನೂ ಸಮಸ್ತ ಜನರೂ ದೇವರ ಆಲಯವನ್ನು ಪ್ರತಿಷ್ಠೆಮಾಡಿದರು.

ಸಂದರ್ಭದೊಂದಿಗೆ ಓದಿ · ೨ ಪೂರ್ವಕಾಲವೃತ್ತಾಂತ 7

3ಇಸ್ರಾಯೇ ಲಿನ ಮಕ್ಕಳೆಲ್ಲರೂ ಬೆಂಕಿಯು ಇಳಿದದ್ದನ್ನು ಮನೆಯ ಮೇಲೆ ಇರುವ ಕರ್ತನ ಮಹಿಮೆಯನ್ನು ಕಂಡಾಗ ನೆಲಕ್ಕೆ ತಮ್ಮ ಮುಖಗಳನ್ನು ಬಾಗಿಸಿ ಆರಾಧಿಸಿ ಕರ್ತ ನನ್ನು ಕೊಂಡಾಡಿ--ಆತನು ಒಳ್ಳೆಯವನು, ಆತನ ಕೃಪೆಯು ಯುಗಯುಗಕ್ಕೂ ಇರುವದು ಎಂದು ಹೇಳಿ ದರು.

4ಆಗ ಅರಸನೂ ಸಮಸ್ತ ಜನರೂ ಕರ್ತ ನಿಗೆ ಬಲಿಗಳನ್ನು ಅರ್ಪಿಸಿದರು.

5ಅರಸನಾದ ಸೊಲೊ ಮೋನನು ಇಪ್ಪತ್ತೆರಡು ಸಾವಿರ ಎತ್ತುಗಳನ್ನೂ ಲಕ್ಷದ ಇಪ್ಪತ್ತುಸಾವಿರ ಕುರಿಗಳನ್ನೂ ಬಲಿಯಾಗಿ ಅರ್ಪಿಸಿ ದನು. ಹೀಗೆಯೇ ಅರಸನೂ ಸಮಸ್ತ ಜನರೂ ದೇವರ ಆಲಯವನ್ನು ಪ್ರತಿಷ್ಠೆಮಾಡಿದರು.

6ಯಾಜಕರು ತಮ್ಮ ತಮ್ಮ ಸೇವೆಯಲ್ಲಿ ನಿಲ್ಲುತ್ತಿದ್ದರು; ಹಾಗೆಯೇ ದಾವೀ ದನು ತಮ್ಮ ಸೇವೆಗಾಗಿ ಹೊಗಳುತ್ತಾ ಕರ್ತನ ಕೃಪೆಯು ಯುಗಯುಗಕ್ಕೂ ಇರುವದೆಂದು ಅರಸನಾದ ದಾವೀ ದನು ಆತನನ್ನು ಕೊಂಡಾಡುವದಕ್ಕೆ ಮಾಡಿಸಿದ ಕರ್ತನ ಗೀತವಾದ್ಯಗಳನ್ನು ಲೇವಿಯರು ಹಿಡುಕೊಂಡಿದ್ದರು. ಯಾಜಕರು ಅವರ ಮುಂದೆ ತುತೂರಿಗಳನ್ನು ಊದಿ ದರು; ಸಮಸ್ತ ಇಸ್ರಾಯೇಲ್ಯರು ನಿಂತಿದ್ದರು.

7ಇದ ಲ್ಲದೆ ಸೊಲೊಮೋನನು ಕರ್ತನ ಆಲಯದ ಮುಂದಿ ರುವ ಮಧ್ಯ ಅಂಗಳವನ್ನು ಪರಿಶುದ್ಧಮಾಡಿದನು; ಯಾಕಂದರೆ ಸೊಲೊಮೋನನು ಮಾಡಿಸಿದ ತಾಮ್ರದ ಪೀಠದ ಮೇಲೆ ದಹನಬಲಿಗಳನ್ನೂ ಕಾಣಿಕೆಗಳನ್ನೂ ಕೊಬ್ಬನ್ನೂ ಇಡುವದಕ್ಕೆ ಸ್ಥಳ ಸಾಲದೆ ಇದ್ದದ್ದರಿಂದ ಅಲ್ಲಿ ಅವನು ದಹನಬಲಿಗಳನ್ನೂ ಸಮಾಧಾನದ ಬಲಿಗಳ ಕೊಬ್ಬನ್ನೂ ಅರ್ಪಿಸಿದನು.

೨ ಪೂರ್ವಕಾಲವೃತ್ತಾಂತ 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी