ವಿಮೋಚನಕಾಂಡ 38:25

ಪರಿಶುದ್ಧಾಲಯ ನಿಯಮದ ಮೇರೆಗೆ ಸಭೆ ಯವರು ಎಣಿಸಿದ ಬೆಳ್ಳಿಯು ಒಂದು ನೂರು ತಲಾಂತು, ಒಂದು ಸಾವಿರದ ಏಳುನೂರ ಎಪ್ಪತ್ತೈದು ಶೆಕೆಲು ಗಳಾಗಿತ್ತು.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 38

23ಅವನ ಜೊತೆಯಲ್ಲಿ ದಾನ ಕುಲದವನಾದ ಅಹೀಸಾಮಾಕನ ಮಗನಾದ ಒಹೋಲಿಯಾಬನೂ ಇದ್ದನು. ಇವನು ಕೆತ್ತನೆ ಕೆಲಸ ಮಾಡುವವನೂ ಕುಶಲ ಕೆಲಸಗಾರನೂ ನೀಲಿ ಧೂಮ್ರ ರಕ್ತವರ್ಣ ನಯವಾದ ನೂಲು ಇವುಗಳಿಂದ ಕಸೂತಿ ಕೆಲಸ ಮಾಡುವವನೂ ಆಗಿದ್ದನು.

24ಪರಿಶುದ್ಧಾಲಯ ನಿಯಮದ ಮೇರೆಗೆ ಪರಿಶುದ್ಧ ಕೆಲಸಕ್ಕೆ ಉಪಯೋಗಿಸಿದ ಎಲ್ಲಾ ಬಂಗಾರವು ಕಾಣಿಕೆಯ ಬಂಗಾರವನ್ನೊಳಗೊಂಡು ಒಟ್ಟು ಇಪ್ಪ ತ್ತೊಂಭತ್ತು ತಲಾಂತು ಮತ್ತು ಏಳುನೂರ ಮೂವತ್ತು ಶೆಕೆಲುಗಳಾಗಿತ್ತು.

25ಪರಿಶುದ್ಧಾಲಯ ನಿಯಮದ ಮೇರೆಗೆ ಸಭೆ ಯವರು ಎಣಿಸಿದ ಬೆಳ್ಳಿಯು ಒಂದು ನೂರು ತಲಾಂತು, ಒಂದು ಸಾವಿರದ ಏಳುನೂರ ಎಪ್ಪತ್ತೈದು ಶೆಕೆಲು ಗಳಾಗಿತ್ತು.

26ಪರಿಶುದ್ಧಾಲಯ ನಿಯಮದ ಮೇರೆಗೆ ತಲಾ ಒಂದು ಬೆಕಾ, ಅಂದರೆ ಅರ್ಧ ಶೆಕೆಲಿನಂತೆ ಇಪ್ಪತ್ತು ಮೊದಲುಗೊಂಡು ಅದಕ್ಕೆ ಮೇಲಿನ ಪ್ರಾಯ ದವರನ್ನು ಲೆಕ್ಕ ಮಾಡಲಾಗಿ ಆರು ಲಕ್ಷ ಮೂರು ಸಾವಿರದ ಐದು ನೂರ ಐವತ್ತು ಗಂಡಸರ ಸಂಖ್ಯೆ ಇತ್ತು.

27ಪರಿಶುದ್ಧಾಲಯದ ಕುಣಿಕೆಗಳಿಗೆ ಮತ್ತು ತೆರೆಗಳ ಕುಣಿಕೆಗಳಿಗೆ ಎರಕ ಹೊಯ್ಯಲು ಒಂದು ನೂರು ತಲಾಂತು ಬೆಳ್ಳಿ ಹಿಡಿಯಿತು; ಒಂದು ಕುಣಿಕೆಗೆ ಒಂದು ತಲಾಂತಿನಂತೆ ನೂರು ಕುಣಿಕೆಗಳಿಗೆ ನೂರು ತಲಾಂತು ಬೆಳ್ಳಿ ಆಯಿತು.

ವಿಮೋಚನಕಾಂಡ 38 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी