ಪ್ರಕಟನೆ 21:9

ಕಡೇ ಏಳು ಉಪದ್ರವಗಳಿಂದ ತುಂಬಿದ ಏಳು ಪಾತ್ರೆಗಳನ್ನು ಹಿಡಿದಿದ್ದ ಏಳು ಮಂದಿ ದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡುತ್ತಾ--ಇಲ್ಲಿಗೆ ಬಾ, ಕುರಿಮರಿಯಾದಾತನಿಗೆ ಹೆಂಡತಿಯಾಗ ತಕ್ಕ ಮದಲಗಿತ್ತಿಯನ್ನು ನಿನಗೆ ತೋರಿಸುವೆನು ಎಂದು ಹೇಳಿದನು.

ಸಂದರ್ಭದೊಂದಿಗೆ ಓದಿ · ಪ್ರಕಟನೆ 21

7ಜಯಹೊಂದುವವನು ಎಲ್ಲವುಗಳಿಗೆ ಬಾಧ್ಯನಾಗುವನು; ನಾನು ಅವನ ದೇವರಾಗಿರುವೆನು. ಅವನು ನನ್ನ ಮಗನಾಗಿರುವನು.

8ಆದರೆ ಭಯ ಗ್ರಸ್ಥರು, ನಂಬಿಕೆಯಿಲ್ಲದವರು, ಅಸಹ್ಯವಾದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾ ರಾಧಕರು ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳು ಉರಿಯುವ ಕೆರೆಯೇ; ಅದು ಎರಡನೆಯ ಮರಣವು ಎಂದು ನನಗೆ ಹೇಳಿದನು.

9ಕಡೇ ಏಳು ಉಪದ್ರವಗಳಿಂದ ತುಂಬಿದ ಏಳು ಪಾತ್ರೆಗಳನ್ನು ಹಿಡಿದಿದ್ದ ಏಳು ಮಂದಿ ದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡುತ್ತಾ--ಇಲ್ಲಿಗೆ ಬಾ, ಕುರಿಮರಿಯಾದಾತನಿಗೆ ಹೆಂಡತಿಯಾಗ ತಕ್ಕ ಮದಲಗಿತ್ತಿಯನ್ನು ನಿನಗೆ ತೋರಿಸುವೆನು ಎಂದು ಹೇಳಿದನು.

10ಅವನು ಆತ್ಮದಲ್ಲಿ ನನ್ನನ್ನು ಎತ್ತರವಾದ ದೊಡ್ಡ ಬೆಟ್ಟಕ್ಕೆ ಎತ್ತಿಕೊಂಡು ಹೋಗಿ ಪರಲೋಕ ದೊಳಗಿಂದ ಪರಿಶುದ್ಧವಾದ ಯೆರೂಸಲೇಮೆಂಬ ಆ ದೊಡ್ಡ ಪಟ್ಟಣವು ದೇವರ ಕಡೆಯಿಂದ ಇಳಿದು ಬರುವ ದನ್ನು ನನಗೆ ತೋರಿಸಿದನು.

11ಅದರಲ್ಲಿ ದೇವರ ಮಹಿಮೆ ಇತ್ತು; ಪಟ್ಟಣದ ಪ್ರಕಾಶವು ಅಮೂಲ್ಯವಾದ ಕಲ್ಲಿನ ಪ್ರಕಾಶಕ್ಕೆ ಸಮಾನವಾಗಿತ್ತು; ಅದು ಸೂರ್ಯ ಕಾಂತದಂತೆ ಥಳಥಳಿಸುತ್ತಿತ್ತು.

ಪ್ರಕಟನೆ 21 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी