ವಿಮೋಚನಕಾಂಡ 38:21

ಮೋಶೆಯ ಆಜ್ಞೆಯ ಮೇರೆಗೆ ಲೇವಿಯ ಸೇವೆಗಾಗಿ ಯಾಜಕನಾದ ಆರೋನನ ಮಗ ಈತಾಮಾರನ ಕೈಗೆ ಒಪ್ಪಿಸಿದ ಸಾಕ್ಷಿ ಗುಡಾರವನ್ನೊಳಗೊಂಡ ಗುಡಾ ರವನ್ನು ನಿರ್ಮಿಸಲು ಮಾಡಬೇಕಾದ ಒಟ್ಟು ಏರ್ಪಾಡುಗಳು ಇವೇ.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 38

19ಅವುಗಳಿಗೆ ನಾಲ್ಕು ಸ್ತಂಭಗಳು, ಆ ಸ್ತಂಭಗಳಿಗೆ ನಾಲ್ಕು ಹಿತ್ತಾಳೆಯ ಕಾಲು ಕುಣಿಕೆಗಳು ಇದ್ದವು; ಅವುಗಳ ಕೊಂಡಿಗಳು ಬೆಳ್ಳಿಯದಾಗಿದ್ದವು, ಅವುಗಳ ಬೋದಿಗಳ ಹೊದಿಕೆಯೂ ಅಲಂಕಾರದ ಪಟ್ಟಿಗಳೂ ಬೆಳ್ಳಿಯದಾಗಿದ್ದವು.

20ಗುಡಾರದ ಅಂಗಳ ಸುತ್ತಲೂ ಇರುವ ಗೂಟಗಳು ಹಿತ್ತಾಳೆಯದಾಗಿದ್ದವು.

21ಮೋಶೆಯ ಆಜ್ಞೆಯ ಮೇರೆಗೆ ಲೇವಿಯ ಸೇವೆಗಾಗಿ ಯಾಜಕನಾದ ಆರೋನನ ಮಗ ಈತಾಮಾರನ ಕೈಗೆ ಒಪ್ಪಿಸಿದ ಸಾಕ್ಷಿ ಗುಡಾರವನ್ನೊಳಗೊಂಡ ಗುಡಾ ರವನ್ನು ನಿರ್ಮಿಸಲು ಮಾಡಬೇಕಾದ ಒಟ್ಟು ಏರ್ಪಾಡುಗಳು ಇವೇ.

22ಕರ್ತನು ಮೋಶೆಗೆ ಆಜ್ಞಾಪಿಸಿದ್ದನ್ನೆಲ್ಲಾ ಯೂದಾ ಕುಲದವನಾದ ಹೂರನ ಮೊಮ್ಮಗನೂ ಊರಿಯನ ಮಗನೂ ಆದ ಬೆಚಲೇಲನು ಮಾಡಿದನು.

23ಅವನ ಜೊತೆಯಲ್ಲಿ ದಾನ ಕುಲದವನಾದ ಅಹೀಸಾಮಾಕನ ಮಗನಾದ ಒಹೋಲಿಯಾಬನೂ ಇದ್ದನು. ಇವನು ಕೆತ್ತನೆ ಕೆಲಸ ಮಾಡುವವನೂ ಕುಶಲ ಕೆಲಸಗಾರನೂ ನೀಲಿ ಧೂಮ್ರ ರಕ್ತವರ್ಣ ನಯವಾದ ನೂಲು ಇವುಗಳಿಂದ ಕಸೂತಿ ಕೆಲಸ ಮಾಡುವವನೂ ಆಗಿದ್ದನು.

ವಿಮೋಚನಕಾಂಡ 38 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी