ನಾನು ಬಾಬೆಲಿನಲ್ಲಿರುವ ಬೇಲ್‌ನನ್ನು ದಂಡಿಸಿ ಅವನು ನುಂಗಿದ್ದನ್ನು ಅವನ ಬಾಯೊಳಗಿಂದ ಹೊರಗೆ ತರಿಸುವೆನು; ಇನ್ನು ಮೇಲೆ ಜನಾಂಗಗಳು ಅವನ ಬಳಿಗೆ ಪ್ರವಾಹವಾಗಿ ಬರುವದಿಲ್ಲ; ಹೌದು, ಬಾಬೆಲಿನ ಗೋಡೆ ಬೀಳುವದು.
42ಬಾಬೆಲಿನ ಮೇಲೆ ಸಮುದ್ರವು ಬಂತು; ಅದರ ತೆರೆಗಳ ಸಮೂಹದಿಂದ ಮುಚ್ಚಲ್ಪಟ್ಟಿದೆ.
43ಅದರ ಪಟ್ಟಣಗಳು ಹಾಳಾದವು; ಅವು ಒಣನೆಲವೂ ಅಡವಿಯೂ ಯಾರೂ ವಾಸಮಾಡದೆ, ಮನುಷ್ಯನ ಮಗನು ಹಾದುಹೋಗದೆ ಇರುವ ದೇಶವೂ ಆಗಿವೆ.
44ನಾನು ಬಾಬೆಲಿನಲ್ಲಿರುವ ಬೇಲ್‌ನನ್ನು ದಂಡಿಸಿ ಅವನು ನುಂಗಿದ್ದನ್ನು ಅವನ ಬಾಯೊಳಗಿಂದ ಹೊರಗೆ ತರಿಸುವೆನು; ಇನ್ನು ಮೇಲೆ ಜನಾಂಗಗಳು ಅವನ ಬಳಿಗೆ ಪ್ರವಾಹವಾಗಿ ಬರುವದಿಲ್ಲ; ಹೌದು, ಬಾಬೆಲಿನ ಗೋಡೆ ಬೀಳುವದು.
45ನನ್ನ ಜನರೇ, ಅದರೊಳಗಿಂದ ಹೊರಡಿರಿ; ಪ್ರತಿಯೊಬ್ಬನೂ ತನ್ನ ತನ್ನ ಪ್ರಾಣವನ್ನು ಕರ್ತನ ಕೋಪದ ಉರಿಗೆ ತಪ್ಪಿಸಿರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ