ಆದದ ರಿಂದ ಅವನ ತಂದೆ ತಾಯಿಗಳು--ಅವನು ಪ್ರಾಯದ ವನಾಗಿದ್ದಾನಲ್ಲಾ; ಅವನನ್ನೇ ಕೇಳಿರಿ ಎಂದು ಹೇಳಿದರು.
21ಆದರೆ ಅವನು ಈಗ ಯಾವದರ ಮೂಲಕ ನೋಡುತ್ತಾನೋ ನಮಗೆ ಗೊತ್ತಿಲ್ಲ; ಇಲ್ಲವೆ ಯಾರು ಅವನ ಕಣ್ಣುಗಳನ್ನು ತೆರೆದರೋ ಅದೂ ನಮಗೆ ಗೊತ್ತಿಲ್ಲ; ಅವನು ಪ್ರಾಯದವನಾಗಿದ್ದಾನೆ. ಅವನನ್ನೇ ಕೇಳಿರಿ; ಅವನೇ ತನ್ನ ವಿಷಯ ಮಾತನಾಡುವನು ಎಂದು ಹೇಳಿದರು.
22ಅವನ ತಂದೆತಾಯಿಗಳು ಯೆಹೂದ್ಯರಿಗೆ ಭಯಪಟ್ಟ ದ್ದರಿಂದ ಈ ಮಾತುಗಳನ್ನು ಹೇಳಿದರು; ಯಾಕಂದರೆ ಯಾವನಾದರೂ ಆತನು ಕ್ರಿಸ್ತನೆಂದು ಒಪ್ಪಿಕೊಂಡರೆ ಅವನನ್ನು ಸಭಾಮಂದಿರದಿಂದ ಬಹಿಷ್ಕರಿಸಬೇಕೆಂದು ಯೆಹೂದ್ಯರು ಆಗಲೇ ನಿರ್ಣಯಿಸಿದ್ದರು.
23ಆದದ ರಿಂದ ಅವನ ತಂದೆ ತಾಯಿಗಳು--ಅವನು ಪ್ರಾಯದ ವನಾಗಿದ್ದಾನಲ್ಲಾ; ಅವನನ್ನೇ ಕೇಳಿರಿ ಎಂದು ಹೇಳಿದರು.
24ತರುವಾಯ ಅವರು ಆ ಕುರುಡನಾಗಿದ್ದ ಮನುಷ್ಯನನ್ನು ಕರೆದು ಅವನಿಗೆ--ದೇವರಿಗೆ ಸ್ತೋತ್ರ ಸಲ್ಲಿಸು; ಈ ಮನುಷ್ಯನು ಪಾಪಿಯೆಂದು ನಾವು ಬಲ್ಲೆವು ಅಂದರು.
25ಅವನು ಪ್ರತ್ಯುತ್ತರವಾಗಿ--ಆತನು ಪಾಪಿಯೋ ಅಲ್ಲವೋ ನನಗೆ ಗೊತ್ತಿಲ್ಲ; ಒಂದು ಮಾತ್ರ ಬಲ್ಲೆನು; ಅದೇನಂದರೆ ನಾನು ಕುರುಡನಾಗಿದ್ದೆನು; ಈಗ ನಾನು ನೋಡುತ್ತೇನೆ ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ