ನಿನ್ನ ಸಹೋದರನಾದ ಆರೋನನ ಗೌರವ ಕ್ಕೋಸ್ಕರವೂ ಅಲಂಕಾರಕ್ಕೋಸ್ಕರವೂ ಪರಿಶುದ್ಧ ವಸ್ತ್ರಗಳನ್ನು ನೀನು ಮಾಡಿಸಬೇಕು.
1ಇದಲ್ಲದೆ ನನಗೆ ಯಾಜಕನ ಸೇವೆಮಾಡುವದಕ್ಕೆ ನೀನು ನಿನ್ನ ಅಣ್ಣನಾದ ಆರೋನನನ್ನೂ ಅವನ ಮಕ್ಕಳಾದ ನಾದಾಬ್ ಅಬೀಹೂ ಎಲಿಯೇಜರ್ ಈತಾಮಾರ್ ಎಂಬವರನ್ನೂ ಇಸ್ರಾಯೇಲ್ ಮಕ್ಕಳಿಂದ ನಿನ್ನ ಹತ್ತಿರ ಬರಮಾಡ ಬೇಕು.
2ನಿನ್ನ ಸಹೋದರನಾದ ಆರೋನನ ಗೌರವ ಕ್ಕೋಸ್ಕರವೂ ಅಲಂಕಾರಕ್ಕೋಸ್ಕರವೂ ಪರಿಶುದ್ಧ ವಸ್ತ್ರಗಳನ್ನು ನೀನು ಮಾಡಿಸಬೇಕು.
3ಇದಲ್ಲದೆ ನಾನು ಜ್ಞಾನದ ಆತ್ಮವನ್ನು ತುಂಬಿಸಿದ ವಿವೇಕ ಹೃದಯ ವಿರುವವರ ಸಂಗಡ ನೀನು ಮಾತನಾಡು, ಅವರು ಆರೋನನ ವಸ್ತ್ರಗಳನ್ನು ಮಾಡಲಿ. ಅವನು ನನಗೆ ಯಾಜಕ ಸೇವೆಮಾಡುವಂತೆ ನೀನು ಅವನನ್ನು ಪ್ರತಿಷ್ಠಿಸ ಬೇಕು.
4ಅವರು ಮಾಡಬೇಕಾದ ವಸ್ತ್ರಗಳು ಇವೇ: ಎದೆಪದಕವು ಎಫೋದ ನಿಲುವಂಗಿ ಕಸೂತಿಯ ಕೆಲಸದ ಮೇಲಂಗಿ ಮುಂಡಾಸ ನಡುಕಟ್ಟು; ನಿನ್ನ ಸಹೋದರ ನಾದ ಆರೋನನೂ ಅವನ ಕುಮಾರರೂ ನನಗೆ ಯಾಜಕ ಸೇವೆಮಾಡುವದಕ್ಕೆ ಅವರಿಗಾಗಿ ಪರಿಶುದ್ಧ ವಸ್ತ್ರಗಳನ್ನು ಮಾಡಬೇಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ