ವಿಮೋಚನಕಾಂಡ 22:3

ಅವನು ಕಳ್ಳತನ ಮಾಡುವಾಗ ಸೂರ್ಯೋದಯ ವಾದರೆ ಹೊಡೆದವನ ರಕ್ತ ಸುರಿಸಬೇಕು; ಕಳ್ಳನು ಸಿಕ್ಕಿದರೆ ಪೂರ್ಣವಾಗಿ ಬದಲು ಕೊಡಬೇಕು. ಅವನಲ್ಲಿ ಏನೂ ಇಲ್ಲದ ಪಕ್ಷಕ್ಕೆ ಅವನ ಕಳ್ಳತನಕ್ಕಾಗಿ ಅವನು ಮಾರಲ್ಪಡಬೇಕು.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 22

1ಒಬ್ಬನು ಎತ್ತನ್ನಾಗಲಿ ಕುರಿಯನ್ನಾಗಲಿ ಕದ್ದು ಕೊಯ್ದರೆ ಇಲ್ಲವೆ ಅದನ್ನು ಮಾರಿದರೆ ಅವನು ಒಂದು ಎತ್ತಿಗೆ ಬದಲಾಗಿ ಐದು ಎತ್ತುಗಳನ್ನೂ ಒಂದು ಕುರಿಗೆ ನಾಲ್ಕು ಕುರಿಗಳನ್ನೂ ಕೊಡಬೇಕು.

2ಒಬ್ಬ ಕಳ್ಳನು ಕನ್ನ ಕೊರೆಯುವಾಗ ಸಿಕ್ಕಿದರೆ ಅವನನ್ನು ಹೊಡೆದು ಸಾಯಿಸುವವನ ರಕ್ತಸುರಿಸಬಾರದು.

3ಅವನು ಕಳ್ಳತನ ಮಾಡುವಾಗ ಸೂರ್ಯೋದಯ ವಾದರೆ ಹೊಡೆದವನ ರಕ್ತ ಸುರಿಸಬೇಕು; ಕಳ್ಳನು ಸಿಕ್ಕಿದರೆ ಪೂರ್ಣವಾಗಿ ಬದಲು ಕೊಡಬೇಕು. ಅವನಲ್ಲಿ ಏನೂ ಇಲ್ಲದ ಪಕ್ಷಕ್ಕೆ ಅವನ ಕಳ್ಳತನಕ್ಕಾಗಿ ಅವನು ಮಾರಲ್ಪಡಬೇಕು.

4ಕಳ್ಳತನ ಮಾಡಿದ ಎತ್ತಾಗಲಿ ಕತ್ತೆಯಾಗಲಿ ಕುರಿಯಾಗಲಿ ಕದ್ದವನ ಬಳಿಯಲ್ಲಿ ಜೀವವುಳ್ಳದ್ದಾಗಿ ನಿಜವಾಗಿ ಸಿಕ್ಕಿದರೆ ಅವನು ಎರಡರಷ್ಟು ತಿರಿಗಿ ಕೊಡಬೇಕು.

5ಒಬ್ಬನು ಇನ್ನೊಬ್ಬನ ಹೊಲದಲ್ಲಿ ತನ್ನ ಪಶುಗಳನ್ನು ಬಿಟ್ಟು ಬೆಳೆಯನ್ನೂ ದ್ರಾಕ್ಷೇತೋಟವನ್ನೂ ಮೇಯಿಸಿ ದರೆ ಅವನು ತನ್ನ ಸ್ವಂತ ಹೊಲದ ಉತ್ತಮ ಭಾಗವನ್ನೂ ದ್ರಾಕ್ಷೇತೋಟದಲ್ಲಿ ಉತ್ತಮವಾದದ್ದನ್ನೂ ಬದಲು ಕೊಡಬೇಕು.

ವಿಮೋಚನಕಾಂಡ 22 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी