ಅವರು ಅದನ್ನೂ ಅದರ ಎಲ್ಲಾ ವಸ್ತುಗಳನ್ನೂ ಕಡಲು ಹಂದಿಯ ಚರ್ಮಗಳ ಮುಚ್ಚಳ ದೊಳಗೆ ಇಟ್ಟು ಅಡ್ಡದಂಡೆಯ ಮೇಲೆ ಹಾಕಬೇಕು.
8ಅವೆ ಲ್ಲವುಗಳ ಮೇಲೆ ಕಡುಗೆಂಪಾದ ವಸ್ತ್ರವನ್ನು ಹಾಸಿ ಅದನ್ನು ಕಡಲು ಹಂದಿಯ ಚರ್ಮಗಳ ಹೊದಿಕೆಯಿಂದ ಹೊದಿಸಿ ಅದರ ಕೋಲುಗಳನ್ನು ಇಡಬೇಕು.
9ಇದ ಲ್ಲದೆ ಅವರು ನೀಲಿ ವಸ್ತ್ರವನ್ನು ತಕ್ಕೊಂಡು ಅದರಿಂದ ದೀಪಸ್ತಂಭವನ್ನೂ ಅದರ ದೀಪಗಳನ್ನೂ ಚಮಟಿಕೆಗಳನ್ನೂ ದೀಪದ ಕುಡಿತೆಗೆಯುವ ಬಟ್ಟಲುಗಳನ್ನೂ ಅದಕ್ಕೆ ಸೇವೆ ಮಾಡುವ ಸಕಲ ಎಣ್ಣೆಯ ಪಾತ್ರೆಗಳನ್ನೂ ಮುಚ್ಚಬೇಕು.
10ಅವರು ಅದನ್ನೂ ಅದರ ಎಲ್ಲಾ ವಸ್ತುಗಳನ್ನೂ ಕಡಲು ಹಂದಿಯ ಚರ್ಮಗಳ ಮುಚ್ಚಳ ದೊಳಗೆ ಇಟ್ಟು ಅಡ್ಡದಂಡೆಯ ಮೇಲೆ ಹಾಕಬೇಕು.
11ಇದಲ್ಲದೆ ಬಂಗಾರದ ಬಲಿಪೀಠದ ಮೇಲೆ ಅವರು ನೀಲಿ ವಸ್ತ್ರವನ್ನು ಹಾಸಿ ಅದನ್ನು ಕಡಲು ಹಂದಿಯ ಚರ್ಮವನ್ನು ಮುಚ್ಚಳ ಹೊದಿಸಿ ಅದರ ಕೋಲುಗಳನ್ನು ಇಡಬೇಕು.
12ಪರಿಶುದ್ಧ ಸ್ಥಳದಲ್ಲಿ ಸೇವೆಮಾಡುವ ಸೇವೆಯ ಎಲ್ಲಾ ವಸ್ತುಗಳನ್ನು ಅವರು ತಕ್ಕೊಂಡು ನೀಲಿ ವಸ್ತ್ರದಿಂದ ಕಟ್ಟಿ ಕಡಲು ಹಂದಿಯ ಚರ್ಮಗಳ ಹೊದಿಕೆಯಿಂದ ಮುಚ್ಚಿ ಅಡ್ಡದಂಡೆಯ ಮೇಲೆ ಹಾಕಬೇಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ