ಕೀರ್ತನೆಗಳು 5:8

ಓ ಕರ್ತನೇ, ನನ್ನ ವಿರೋಧಿಗಳ ನಿಮಿತ್ತ ನಿನ್ನ ನೀತಿಯಲ್ಲಿ ನನ್ನನ್ನು ನಡಿಸು; ನಿನ್ನ ಮಾರ್ಗವನ್ನು ನನ್ನ ಮುಂದೆ ಸರಾಗಮಾಡು.

ಸಂದರ್ಭದೊಂದಿಗೆ ಓದಿ · ಕೀರ್ತನೆಗಳು 5

6ಸುಳ್ಳಾಡುವವರನ್ನು ನೀನು ನಾಶಮಾಡುತ್ತೀ; ಕೊಲೆಗಾರರನ್ನು ಮತ್ತು ಮೋಸಗಾರರನ್ನು ಕರ್ತನು ಅಸಹ್ಯಿಸುತ್ತಾನೆ.

7ನಾನಾದರೋ, ನಿನ್ನ ಕರುಣಾತಿಶಯದಿಂದ ನಿನ್ನ ಆಲಯಕ್ಕೆ ಬರುವೆನು; ನಿನಗೆ ಭಯಪಟ್ಟು ನಿನ್ನ ಪರಿಶುದ್ಧ ಮಂದಿರದ ಕಡೆಗೆ ಆರಾಧಿಸುವೆನು.

8ಓ ಕರ್ತನೇ, ನನ್ನ ವಿರೋಧಿಗಳ ನಿಮಿತ್ತ ನಿನ್ನ ನೀತಿಯಲ್ಲಿ ನನ್ನನ್ನು ನಡಿಸು; ನಿನ್ನ ಮಾರ್ಗವನ್ನು ನನ್ನ ಮುಂದೆ ಸರಾಗಮಾಡು.

9ಅವರ ಬಾಯಲ್ಲಿ ನಂಬಿಗಸ್ತಿಕೆಯು ಇಲ್ಲವೇ ಇಲ್ಲ. ಅವರ ಒಳಭಾಗವು ಅತಿ ದುಷ್ಟತ್ವವೇ. ಅವರ ಗಂಟಲು ತೆರೆದ ಸಮಾ ಧಿಯೇ; ತಮ್ಮ ನಾಲಿಗೆಯಿಂದ ಹೆಮ್ಮೆ ಕೊಚ್ಚಿ ಕೊಳ್ಳುತ್ತಾರೆ.

10ಓ ದೇವರೇ, ಅವರನ್ನು ನಾಶಮಾಡು; ಅವರು ತಮ್ಮ ಸ್ವಂತ ಆಲೋಚನೆಗಳಿಂದ ಬಿದ್ದು ಹೋಗಲಿ; ಅವರ ಅಪಾರವಾದ ದ್ರೋಹಗಳ ನಿಮಿತ್ತ ಅವರನ್ನು ಹೊರಗೆ ಹಾಕು; ಯಾಕಂದರೆ ಅವರು ನಿನಗೆ ವಿರೋಧವಾಗಿ ತಿರುಗಿ ಬಿದ್ದಿದ್ದಾರೆ.

ಕೀರ್ತನೆಗಳು 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी