೧ ಸಮುವೇಲನು 30:9

ಆಗ ದಾವೀದನೂ ಅವನ ಸಂಗಡ ಇದ್ದ ಆರು ನೂರು ಜನರೂ ಹೋದರು; ಅವರು ಬೆಸೋರ್‌ ಎಂಬ ಹಳ್ಳದ ಬಳಿಗೆ ಬಂದಾಗ ಹಿಂದುಳಿದವರು ಅಲ್ಲಿ ನಿಂತರು.

ಸಂದರ್ಭದೊಂದಿಗೆ ಓದಿ · ೧ ಸಮುವೇಲನು 30

7ಆಗ ದಾವೀದನು ಅಹೀಮೆಲೆಕನ ಮಗನಾದ ಎಬ್ಯಾತಾರನೆಂಬ ಯಾಜಕ ನಿಗೆ--ನೀನು ದಯಮಾಡಿ ಏಫೋದನ್ನು ನನಗಾಗಿ ತಕ್ಕೊಂಡು ಬಾ ಅಂದನು. ಹಾಗೆಯೇ ಎಬ್ಯಾತಾರನು ಎಫೋದನ್ನು ದಾವೀದನ ಬಳಿಗೆ ತಂದನು.

8ದಾವೀದನು ಕರ್ತನಿಗೆ--ನಾನು ಆ ದಂಡಿನ ಹಿಂದೆ ಬೆನ್ನಟ್ಟಲೋ? ನಾನು ಅವರನ್ನು ಹಿಂದಟ್ಟಬಹುದೋ ಎಂದು ಕೇಳಿದನು. ಅದಕ್ಕೆ ಆತನು--ನೀನು ಹಿಂದಟ್ಟು; ನಿಶ್ಚಯವಾಗಿ ನೀನು ಅವರನ್ನು ಹಿಂದಟ್ಟಿ ಎಲ್ಲರನ್ನು ಬಿಡಿಸಿಕೊಳ್ಳುವಿ ಅಂದನು.

9ಆಗ ದಾವೀದನೂ ಅವನ ಸಂಗಡ ಇದ್ದ ಆರು ನೂರು ಜನರೂ ಹೋದರು; ಅವರು ಬೆಸೋರ್‌ ಎಂಬ ಹಳ್ಳದ ಬಳಿಗೆ ಬಂದಾಗ ಹಿಂದುಳಿದವರು ಅಲ್ಲಿ ನಿಂತರು.

10ದಾವೀದನು, ತಾನೂ ನಾನೂರು ಜನರೂ ಹಿಂದಟ್ಟಿಹೋದರು. ಬೆಸೋರಿನ ಹಳ್ಳವನ್ನು ದಾಟಲಾರದೆ ದಣಿದಿದ್ದದರಿಂದ ಇನ್ನೂರು ಜನರು ಅಲ್ಲಿ ನಿಂತರು.

11ಅವರು ಒಬ್ಬ ಐಗುಪ್ತ್ಯನನ್ನು ಅಡವಿಯಲ್ಲಿ ಕಂಡುಕೊಂಡು ಅವನನ್ನು ದಾವೀದನ ಬಳಿಗೆ ತಂದು ಅವನಿಗೆ ರೊಟ್ಟಿಕೊಟ್ಟರು; ಅವನು ತಿಂದನು.

೧ ಸಮುವೇಲನು 30 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी