೧ ಥೆಸಲೊನೀಕದವರಿಗೆ 2:3

ಯಾಕಂದರೆ ನಮ್ಮ ಬೋಧನೆಯು ಮೋಸ ವಲ್ಲ, ಅಶುದ್ಧವಲ್ಲ, ವಂಚನೆಯಲ್ಲ;

ಸಂದರ್ಭದೊಂದಿಗೆ ಓದಿ · ೧ ಥೆಸಲೊನೀಕದವರಿಗೆ 2

1ಸಹೋದರರೇ, ನಾವು ನಿಮ್ಮ ಬಳಿಗೆ ಬಂದದ್ದು ವ್ಯರ್ಥವಾಗಲಿಲ್ಲವೆಂಬದನ್ನು ನೀವೇ ತಿಳಿದಿದ್ದೀರಿ.

2ಫಿಲಿಪ್ಪಿ ಪಟ್ಟಣದಲ್ಲಿ ನಮಗೆ ಹಿಂಸೆ ಮತ್ತು ಅವಮಾನವು ಮೊದಲು ಸಂಭವಿಸಿದರೂ ನಾವು ನಮ್ಮ ದೇವರ ಮೂಲಕ ಧೈರ್ಯಗೊಂಡು ಬಹು ವಿರೋಧವನ್ನು ಅನುಭವಿಸುವವರಾಗಿ ನಿಮಗೆ ದೇವರ ಸುವಾರ್ತೆಯನ್ನು ತಿಳಿಸಿದೆವೆಂಬದನ್ನು ನೀವು ಬಲ್ಲಿರಿ.

3ಯಾಕಂದರೆ ನಮ್ಮ ಬೋಧನೆಯು ಮೋಸ ವಲ್ಲ, ಅಶುದ್ಧವಲ್ಲ, ವಂಚನೆಯಲ್ಲ;

4ದೇವರು ನಮ್ಮನ್ನು ನಂಬಿ ನಮ್ಮ ವಶಕ್ಕೆ ಸುವಾರ್ತೆಯನ್ನು ಒಪ್ಪಿಸಿದನಲ್ಲಾ. ಆದದರಿಂದ ನಾವು ಮನುಷ್ಯರನ್ನು ಮೆಚ್ಚಿಸಬೇಕೆನ್ನದೆ ನಮ್ಮ ಹೃದಯಗಳನ್ನು ಪರಿಶೋಧಿಸುವ ದೇವರನ್ನೇ ಮೆಚ್ಚಿಸಬೇಕೆಂದು ಮಾತನಾಡುತ್ತೇವೆ.

5ನಿಮಗೆ ತಿಳಿದಿ ರುವ ಪ್ರಕಾರ ನಾವು ಎಂದಿಗೂ ಮುಖಸ್ತುತಿಯನ್ನು ಮಾಡುವವರಾಗಿ ಕಾಣಬಂದಿಲ್ಲ. ದ್ರವ್ಯಾಶೆಯನ್ನು ಮರೆಮಾಡುವದಕ್ಕಾಗಿ ವೇಷವನ್ನು ಹಾಕಿಕೊಂಡವ ರಾಗಿಲ್ಲ; ಇದಕ್ಕೆ ದೇವರೇ ಸಾಕ್ಷಿ.

೧ ಥೆಸಲೊನೀಕದವರಿಗೆ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी