ಅಪೊಸ್ತಲರ ಕೃತ್ಯಗಳು 17:32

ಸತ್ತವರ ಪುನರುತ್ಥಾನದ ವಿಷಯವನ್ನು ಕೇಳಿದಾಗ ಕೆಲವರು ಅಪಹಾಸ್ಯ ಮಾಡಿದರು; ಬೇರೆ ಕೆಲವರು--ನೀನು ಈ ವಿಷಯದಲ್ಲಿ ಹೇಳುವದನ್ನು ನಾವು ಇನ್ನೊಂದು ಸಾರಿ ಕೇಳುತ್ತೇವೆ ಅಂದರು.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 17

30ಈ ಅಜ್ಞಾನಕಾಲಗಳನ್ನು ದೇವರುಲಕ್ಷ್ಯಕ್ಕೆ ತರಲಿಲ್ಲ; ಈಗಲಾದರೋ ಆತನು ಎಲ್ಲಾ ಕಡೆಯಲ್ಲಿರುವ ಮನು ಷ್ಯರೆಲ್ಲರೂ ಮಾನಸಾಂತರಪಡಬೇಕೆಂದು ಅಪ್ಪಣೆ ಕೊಡುತ್ತಾನೆ.

31ಯಾಕಂದರೆ ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವದಕ್ಕೆ ಒಂದು ದಿವಸ ವನ್ನು ನೇಮಕ ಮಾಡಿದ್ದಾನೆ. ಆತನನ್ನು ಸತ್ತವರೊಳ ಗಿಂದ ಎಬ್ಬಿಸಿದ್ದರಿಂದ ಇದಕ್ಕೆ ಎಲ್ಲರಿಗೂ ಆಧಾರ ಕೊಟ್ಟಿದ್ದಾನೆ ಅಂದನು.

32ಸತ್ತವರ ಪುನರುತ್ಥಾನದ ವಿಷಯವನ್ನು ಕೇಳಿದಾಗ ಕೆಲವರು ಅಪಹಾಸ್ಯ ಮಾಡಿದರು; ಬೇರೆ ಕೆಲವರು--ನೀನು ಈ ವಿಷಯದಲ್ಲಿ ಹೇಳುವದನ್ನು ನಾವು ಇನ್ನೊಂದು ಸಾರಿ ಕೇಳುತ್ತೇವೆ ಅಂದರು.

33ಹೀಗಿರಲು ಪೌಲನು ಅವರ ಮಧ್ಯದಿಂದ ಹೊರಟುಹೋದನು.

34ಆದರೂ ಕೆಲವರು ಅವನನ್ನು ಅಂಟಿಕೊಂಡು ನಂಬಿದರು; ನಂಬಿದವರಲ್ಲಿ ಅರಿಯೊ ಪಾಗದ ದಿಯೊನುಸ್ಯನೂ ದಾಮರಿಯೆಂಬಾಕೆಯೂ ಅವರೊಂದಿಗೆ ಇನ್ನು ಕೆಲವರೂ ಇದ್ದರು.

ಅಪೊಸ್ತಲರ ಕೃತ್ಯಗಳು 17 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी