ತರುವಾಯ ಇಬ್ಬರು ವೇಶ್ಯಾಸ್ತ್ರೀಯರು ಅರಸನ ಬಳಿಗೆ ಬಂದು ಅವನ ಮುಂದೆ ನಿಂತರು.
14ನೀನು ನಿನ್ನ ತಂದೆಯಾದ ದಾವೀದನು ನಡೆದ ಪ್ರಕಾರ ನನ್ನ ಮಾರ್ಗಗಳಲ್ಲಿ ನಡೆದು ಕಟ್ಟಳೆಗಳನ್ನೂ ಆಜ್ಞೆಗಳನ್ನೂ ಕೈಕೊಂಡರೆ ನಿನ್ನ ದಿವಸಗಳನ್ನು ಹೆಚ್ಚಿಸುವೆನು ಅಂದನು.
15ಆಗ ಸೊಲೊಮೋನನು ಎಚ್ಚತ್ತಾಗ ಇಗೋ, ಅದು ಸ್ವಪ್ನವಾಗಿತ್ತು, ಅವನು ಯೆರೂ ಸಲೇಮಿಗೆ ಬಂದು ಕರ್ತನ ಒಡಂಬಡಿಕೆಯ ಮಂಜೂಷದ ಮುಂದೆ ನಿಂತು ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿ ತನ್ನ ಸೇವಕರಿಗೆ ಔತಣ ಮಾಡಿಸಿದನು.
16ತರುವಾಯ ಇಬ್ಬರು ವೇಶ್ಯಾಸ್ತ್ರೀಯರು ಅರಸನ ಬಳಿಗೆ ಬಂದು ಅವನ ಮುಂದೆ ನಿಂತರು.
17ಅವರಲ್ಲಿ ಒಬ್ಬಳು--ಓ ನನ್ನ ಒಡೆಯನೇ, ನಾನೂ ಈ ಹೆಂಗಸೂ ಒಂದೇ ಮನೆಯಲ್ಲಿ ವಾಸವಾಗಿದ್ದೇವೆ.
18ನಾನು ಅವಳ ಸಂಗಡ ಮನೆಯಲ್ಲಿರುವಾಗ ಮಗುವನ್ನು ಹೆತ್ತೆನು. ನಾನು ಹೆತ್ತ ಮೂರು ದಿವಸಗಳ ತರುವಾಯ ಈ ಹೆಂಗಸು ಕೂಡ ಹೆತ್ತಳು. ನಾವು ಇಬ್ಬರೂ ಕೂಡಿಯೇ ಇದ್ದೆವು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ