ಲಯ ಕಳಂಕ ಕ್ಷಯಗಳಿಲ್ಲದ ಬಾಧ್ಯತೆಗೂ ನಮ್ಮನ್ನು ತಿರಿಗಿ ಹುಟ್ಟಿಸಿದ್ದಾನೆ. ಈ ಬಾಧ್ಯತೆಯು ನಿಮಗೋಸ್ಕರ ಪರಲೋಕದಲ್ಲಿ ಇಟ್ಟಿದೆ.
2ಪವಿತ್ರಾತ್ಮನಿಂದ ಪ್ರತಿಷ್ಟಿಸಲ್ಪಟ್ಟವರಾಗಿ ವಿಧೇಯರಾ ಗುವದಕ್ಕೂ ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗು ವದಕ್ಕೂ ತಂದೆಯಾದ ದೇವರ ಭವಿಷ್ಯದ್ ಜ್ಞಾನಾನು ಸಾರವಾಗಿ ಆರಿಸಿಕೊಳ್ಳಲ್ಪಟ್ಟವರಿಗೆ ಬರೆಯುವದೇ ನಂದರೆ--ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.
3ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ತನ್ನ ಮಹಾ ಕರುಣಾನುಸಾರವಾಗಿ ಜೀವಕರವಾದ ನಿರೀಕ್ಷೆಗೂ
4ಲಯ ಕಳಂಕ ಕ್ಷಯಗಳಿಲ್ಲದ ಬಾಧ್ಯತೆಗೂ ನಮ್ಮನ್ನು ತಿರಿಗಿ ಹುಟ್ಟಿಸಿದ್ದಾನೆ. ಈ ಬಾಧ್ಯತೆಯು ನಿಮಗೋಸ್ಕರ ಪರಲೋಕದಲ್ಲಿ ಇಟ್ಟಿದೆ.
5ಅಂತ್ಯ ಕಾಲದಲ್ಲಿ ಪ್ರಕಟವಾಗುವದಕ್ಕೆ ಸಿದ್ಧವಾಗಿರುವ ರಕ್ಷಣೆಗೆ ನಂಬಿಕೆಯ ಮುಖಾಂತರ ದೇವರು ನಿಮ್ಮನ್ನು ತನ್ನ ಬಲದಿಂದ ಕಾಯುತ್ತಾನೆ.
6ನೀವು ಸದ್ಯಕ್ಕೆ ಸ್ವಲ್ಪಕಾಲ ಅಗತ್ಯವಿದ್ದಲ್ಲಿ ನಾನಾ ಕಷ್ಟಗಳಲ್ಲಿ ದುಃಖಿಸುವವ ರಾಗಿದ್ದರೂ ಬಹಳವಾಗಿ ಹರ್ಷಿಸುವವರಾಗಿದ್ದೀರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ