ಯೋಹಾನನು 8:19

ತರುವಾಯ ಅವರು ಆತನಿಗೆ--ನಿನ್ನ ತಂದೆ ಎಲ್ಲಿ ಅಂದರು. ಅದಕ್ಕೆ ಯೇಸು ಪ್ರತ್ಯುತ್ತರ ವಾಗಿ--ನನ್ನನ್ನಾಗಲಿ ನನ್ನ ತಂದೆಯನ್ನಾಗಲಿ ನೀವು ಅರಿತಿಲ್ಲ; ನೀವು ನನ್ನನ್ನು ಅರಿತುಕೊಂಡಿದ್ದರೆ ನನ್ನ ತಂದೆಯನ್ನು ಸಹ ಅರಿತುಕೊಳ್ಳುತ್ತಿದ್ದಿರಿ ಅಂದನು.

ಸಂದರ್ಭದೊಂದಿಗೆ ಓದಿ · ಯೋಹಾನನು 8

17ಇಬ್ಬರ ಸಾಕ್ಷಿಯು ನಿಜವೆಂದು ನಿಮ್ಮ ನ್ಯಾಯ ಪ್ರಮಾಣದಲ್ಲಿಯೂ ಬರೆದದೆ.

18ನನ್ನ ವಿಷಯವಾಗಿ ನಾನೇ ಸಾಕ್ಷಿ ಕೊಡುತ್ತೇನೆ ಮತ್ತು ನನ್ನನ್ನು ಕಳುಹಿಸಿದ ತಂದೆಯೂ ನನ್ನ ವಿಷಯವಾಗಿ ಸಾಕ್ಷಿಕೊಡುತ್ತಾನೆ ಅಂದನು.

19ತರುವಾಯ ಅವರು ಆತನಿಗೆ--ನಿನ್ನ ತಂದೆ ಎಲ್ಲಿ ಅಂದರು. ಅದಕ್ಕೆ ಯೇಸು ಪ್ರತ್ಯುತ್ತರ ವಾಗಿ--ನನ್ನನ್ನಾಗಲಿ ನನ್ನ ತಂದೆಯನ್ನಾಗಲಿ ನೀವು ಅರಿತಿಲ್ಲ; ನೀವು ನನ್ನನ್ನು ಅರಿತುಕೊಂಡಿದ್ದರೆ ನನ್ನ ತಂದೆಯನ್ನು ಸಹ ಅರಿತುಕೊಳ್ಳುತ್ತಿದ್ದಿರಿ ಅಂದನು.

20ಯೇಸು ದೇವಾಲಯದಲ್ಲಿ ಬೋಧಿಸುತ್ತಿದ್ದಾಗ ಬೊಕ್ಕಸದ ಬಳಿಯಲ್ಲಿ ಈ ಮಾತುಗಳನ್ನು ಆಡಿದನು; ಆದರೆ ಆತನ ಗಳಿಗೆ ಇನ್ನೂ ಬಾರದೆ ಇದ್ದದರಿಂದ ಯಾರೂ ಆತನ ಮೇಲೆ ಕೈಹಾಕಲಿಲ್ಲ.

21ಯೇಸು ತಿರಿಗಿ ಅವರಿಗೆ--ನಾನು ಹೋಗುತ್ತೇನೆ; ನೀವು ನನ್ನನ್ನು ಹುಡುಕುವಿರಿ ಮತ್ತು ನಿಮ್ಮ ಪಾಪ ಗಳಲ್ಲಿ ಸಾಯುವಿರಿ; ನಾನು ಹೋಗುವಲ್ಲಿಗೆ ನೀವು ಬರಲಾರಿರಿ ಅಂದನು.

ಯೋಹಾನನು 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी