ಮತ್ತಾಯನು 12:43

ಅಶುದ್ಧಾತ್ಮವು ಒಬ್ಬ ಮನುಷ್ಯನಿಂದ ಹೊರಗೆ ಹೋದ ಮೇಲೆ ನೀರಿಲ್ಲದ ಸ್ಥಳಗಳಲ್ಲಿ ವಿಶ್ರಾಂತಿಗಾಗಿ ತಿರುಗಾಡಿದರೂ ಅದನ್ನು ಕಂಡುಕೊಳ್ಳಲಿಲ್ಲ.

ಸಂದರ್ಭದೊಂದಿಗೆ ಓದಿ · ಮತ್ತಾಯನು 12

41ನ್ಯಾಯವಿಚಾರಣೆಯಲ್ಲಿ ನಿನೆವೆಯ ಜನರು ಈ ಸಂತತಿಯೊಂದಿಗೆ ಎದ್ದು ಅವರನ್ನು ಖಂಡಿಸು ವರು; ಯಾಕಂದರೆ ಯೋನನು ಸಾರಿದಾಗ ಅವರು ಮಾನಸಾಂತರಪಟ್ಟರು; ಮತ್ತು ಇಗೋ, ಇಲ್ಲಿ ಯೋನ ನಿಗಿಂತಲೂ ದೊಡ್ಡವನಿದ್ದಾನೆ.

42ನ್ಯಾಯವಿಚಾರಣೆ ಯಲ್ಲಿ ದಕ್ಷಿಣದ ರಾಣಿಯು ಈ ಸಂತತಿಯವರೊಂದಿಗೆ ಎದ್ದು ಇವರನ್ನು ಖಂಡಿಸುವಳು; ಯಾಕಂದರೆ ಆಕೆಯು ಸೊಲೊಮೋನನ ಜ್ಞಾನವನ್ನು ಕೇಳುವದಕ್ಕಾಗಿ ಭೂಮಿ ಯ ಕಟ್ಟಕಡೆಯಿಂದ ಬಂದಳು; ಇಗೋ, ಇಲ್ಲಿ ಸೊಲೊ ಮೋನನಿಗಿಂತಲೂ ದೊಡ್ಡವನಿದ್ದಾನೆ.

43ಅಶುದ್ಧಾತ್ಮವು ಒಬ್ಬ ಮನುಷ್ಯನಿಂದ ಹೊರಗೆ ಹೋದ ಮೇಲೆ ನೀರಿಲ್ಲದ ಸ್ಥಳಗಳಲ್ಲಿ ವಿಶ್ರಾಂತಿಗಾಗಿ ತಿರುಗಾಡಿದರೂ ಅದನ್ನು ಕಂಡುಕೊಳ್ಳಲಿಲ್ಲ.

44ಆಗ ಅದು--ನಾನು ಹೊರಟುಬಂದ ನನ್ನ ಮನೆಗೆ ಹಿಂತಿರುಗುವೆನು ಎಂದು ಅಂದುಕೊಂಡು ಬಂದು ಅದು ಬರಿದಾಗಿಯೂ ಗುಡಿಸಿ ಅಲಂಕರಿಸಲ್ಪಟ್ಟದ್ದಾ ಗಿಯೂ ಇರುವದನ್ನು ಕಂಡಿತು.

45ತರುವಾಯ ಅದು ಹೋಗಿ ತನಗಿಂತ ಕೆಟ್ಟವುಗಳಾಗಿರುವ ಬೇರೆ ಏಳು ಆತ್ಮಗಳನ್ನು ಕರಕೊಂಡು ಅವು ಅದರೊಳಗೆ ಪ್ರವೇಶಿಸಿ ವಾಸಮಾಡುತ್ತವೆ; ಹೀಗೆ ಆ ಮನುಷ್ಯನ ಕಡೇ ಸ್ಥಿತಿಯು ಮೊದಲಿಗಿಂತಲೂ ಕೆಟ್ಟದ್ದಾಗಿರುವದು. ಅದರಂತೆಯೇ ಈ ಕೆಟ್ಟ ಸಂತತಿಗೂ ಆಗುವದು ಎಂದು ಹೇಳಿದನು.

ಮತ್ತಾಯನು 12 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी