ಮಿಕ 5:7

ಇದಲ್ಲದೆ ಯಾಕೋಬಿನ ಶೇಷವು ಅನೇಕ ಜನಗಳ ಮಧ್ಯದಲ್ಲಿ ಕರ್ತನಿಂದ ಮಂಜಿನ ಹಾಗೆಯೂ ಹುಲ್ಲಿನ ಮೇಲೆ ಜಡಿಮಳೆಯ ಹಾಗೆಯೂ ಇರುವದು; ಅದು ಮನುಷ್ಯರಿಗೊಸ್ಕರ ತಡೆಮಾಡುವ ದಿಲ್ಲ; ಮನುಷ್ಯನ ಮಕ್ಕಳಿಗೋಸ್ಕರ ಕಾದುಕೊಳ್ಳುವದಿಲ್ಲ.

ಸಂದರ್ಭದೊಂದಿಗೆ ಓದಿ · ಮಿಕ 5

5ಇದಲ್ಲದೆ ಅಶ್ಶೂರ್ಯನು ನಮ್ಮ ದೇಶದಲ್ಲಿ ಬಂದಾಗ ಈತನೇ ಸಮಾಧಾನವಾಗಿರುವನು; ನಮ್ಮ ಅರಮನೆಗಳಲ್ಲಿ ಅವನು ತುಳಿಯುವಾಗ ನಾವು ಆತನಿಗೆ ವಿರೋಧವಾಗಿ ಏಳು ಕುರುಬರನ್ನೂ ಎಂಟು ಮುಖ್ಯ ಮನುಷ್ಯರನ್ನೂ ಎಬ್ಬಿಸುವೆವು.

6ಅವರು ಅಶ್ಶೂರಿನ ದೇಶವನ್ನು ಕತ್ತಿಯಿಂದಲೂ ನಿಮ್ರೋದನ ದೇಶವನ್ನು ಅದರ ಪ್ರವೇಶಗಳಲ್ಲಿಯೂ ಹಾಳುಮಾಡುವರು; ಅಶ್ಶೂರ್ಯನು ನಮ್ಮ ದೇಶದಲ್ಲಿ ಬಂದು ನಮ್ಮ ಪ್ರಾಂತ್ಯಗಳಲ್ಲಿ ತುಳಿಯುವಾಗ ಆತನು ನಮ್ಮನ್ನು ತಪ್ಪಿಸುವನು.

7ಇದಲ್ಲದೆ ಯಾಕೋಬಿನ ಶೇಷವು ಅನೇಕ ಜನಗಳ ಮಧ್ಯದಲ್ಲಿ ಕರ್ತನಿಂದ ಮಂಜಿನ ಹಾಗೆಯೂ ಹುಲ್ಲಿನ ಮೇಲೆ ಜಡಿಮಳೆಯ ಹಾಗೆಯೂ ಇರುವದು; ಅದು ಮನುಷ್ಯರಿಗೊಸ್ಕರ ತಡೆಮಾಡುವ ದಿಲ್ಲ; ಮನುಷ್ಯನ ಮಕ್ಕಳಿಗೋಸ್ಕರ ಕಾದುಕೊಳ್ಳುವದಿಲ್ಲ.

8ಯಾಕೋಬಿನ ಶೇಷವು ಅನೇಕ ಜನಗಳ ಮಧ್ಯದಲ್ಲಿ, ಜನಾಂಗಗಳೊಳಗೆ ಅಡವಿಯ ಮೃಗಗಳಲ್ಲಿ ಸಿಂಹದಂತೆಯೂ ಕುರಿಮಂದೆಗಳಲ್ಲಿ ಪ್ರಾಯದ ಸಿಂಹದಂತೆಯೂ ಇರುವದು; ಅದು ಹಾದುಹೋದರೆ ಇಳಿದುಬಿಟ್ಟು ಹರಿದುಬಿಡುತ್ತದೆ, ಯಾರೂ ಬಿಡಿಸ ಲಾರರು.

9ನಿನ್ನ ಕೈ ನಿನ್ನ ವೈರಿಗಳೆಲ್ಲರ ಮೇಲೆ ಉನ್ನತ ವಾಗಿರುವದು; ನಿನ್ನ ಶತ್ರುಗಳೆಲ್ಲರು ಕಡಿದು ಬಿಡಲ್ಪಡುವರು.

ಮಿಕ 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी