ಯಾಜಕಕಾಂಡ 24:4

ದೀಪಗಳು ಶುದ್ಧವಾದ ದೀಪಸ್ತಂಭದ ಮೇಲೆ ಕರ್ತನ ಸನ್ನಿಧಿಯಲ್ಲಿ ಯಾವಾಗಲೂ ಇರುವಂತೆ ಅವನು ಕ್ರಮಪಡಿಸಬೇಕು.

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 24

2ಬೆಳಕಿ ಗೋಸ್ಕರ ದೀಪಗಳು ಯಾವಾಗಲೂ ಉರಿಯುತ್ತಿ ರುವಂತೆ ಅವರು ಕುಟ್ಟಿದ ಶುದ್ಧವಾದ ಹಿಪ್ಪೇ ಎಣ್ಣೆಯನ್ನು ನಿನ್ನ ಬಳಿಗೆ ತರುವಂತೆ ನೀನು ಇಸ್ರಾಯೇಲ್‌ ಮಕ್ಕಳಿಗೆ ಆಜ್ಞಾಪಿಸಬೇಕು.

3ಸಭೆಯ ಗುಡಾರದೊಳಗೆ ಸಾಕ್ಷಿಯ ಪರದೆಯ ಹೊರಗಡೆ ಕರ್ತನ ಸನ್ನಿಧಿಯಲ್ಲಿ ಸಾಯಂಕಾಲದಿಂದ ಬೆಳಗಿನ ವರೆಗೂ ಇರುವಂತೆ ಆರೋನನು ಅದನ್ನು ಕ್ರಮಪಡಿಸಬೇಕು. ಇದು ನಿಮ್ಮ ಸಂತತಿಯವರೊಳಗೆ ಶಾಶ್ವತವಾದ ನಿಯಮವಾಗಿ ರುವದು.

4ದೀಪಗಳು ಶುದ್ಧವಾದ ದೀಪಸ್ತಂಭದ ಮೇಲೆ ಕರ್ತನ ಸನ್ನಿಧಿಯಲ್ಲಿ ಯಾವಾಗಲೂ ಇರುವಂತೆ ಅವನು ಕ್ರಮಪಡಿಸಬೇಕು.

5ನೀನು ನಯವಾದ ಹಿಟ್ಟನ್ನು ತೆಗೆದುಕೊಂಡು ಹನ್ನೆರಡು ರೊಟ್ಟಿಗಳನ್ನು ಸುಡಬೇಕು; ಹತ್ತರಲ್ಲಿ ಎರಡು ಪಾಲು ಒಂದು ರೊಟ್ಟಿಯಲ್ಲಿ ಇರಬೇಕು.

6ಅವುಗಳನ್ನು ಶುದ್ಧವಾದ ಮೇಜಿನ ಮೇಲೆ ಕರ್ತನ ಸನ್ನಿಧಿಯಲ್ಲಿ ಒಂದು ಸಾಲಿನಲ್ಲಿ ಆರರಂತೆ ಎರಡು ಸಾಲುಗಳನ್ನಾಗಿ ಇಡಬೇಕು.

ಯಾಜಕಕಾಂಡ 24 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी