ಪ್ರಸಂಗಿ 6:4

ಅವನು ವ್ಯರ್ಥದಿಂದ ಬಂದು ಕತ್ತಲೆಯಲ್ಲಿ ಹೊರಟು ಹೋಗು ತ್ತಾನೆ; ಅವನ ಹೆಸರು ಕತ್ತಲೆಯಿಂದ ಮುಚ್ಚಲ್ಪಡುವದು.

ಸಂದರ್ಭದೊಂದಿಗೆ ಓದಿ · ಪ್ರಸಂಗಿ 6

2ತಾನು ಅಪೇಕ್ಷೆ ಪಟ್ಟದ್ದ ರಲ್ಲಿ ಯಾವದೂ ತನ್ನ ಪ್ರಾಣಕ್ಕೆ ಕೊರತೆಯಾಗದಂತೆ ದೇವರು ತನಗೆ ಅನುಗ್ರಹಿಸಿದ ಧನವೂ ಐಶ್ವರ್ಯವೂ ಸನ್ಮಾನವೂ ಇರುವ ಮನುಷ್ಯನಿಗೆ ಅದನ್ನು ಅನುಭವಿಸು ವಂತೆ ಆತನು ಸಾಮರ್ಥ್ಯವನ್ನು ಕೊಡುವದಿಲ್ಲ; ಆದರೆ ಪರನು ಅದನ್ನು ಅನುಭವಿಸುತ್ತಾನೆ; ಇದು ವ್ಯರ್ಥವೂ ಕೆಟ್ಟರೋಗವೂ ಆಗಿದೆ.

3ತನ್ನ ವರುಷಗಳ ದಿನಗಳು ಬಹಳವಾಗಿದ್ದು ತನ್ನ ಪ್ರಾಣವು ಸುಖದಿಂದ ತೃಪ್ತಿ ಪಡದೆ ತನಗೆ ಹೂಣಿಡುವಿಕೆಯು ಇಲ್ಲದೇ ಅವನು ನೂರು ಮಕ್ಕಳನ್ನು ಪಡೆದು ಅನೇಕ ವರುಷಗಳು ಬದುಕಿದರೆ ನಾನು ಹೇಳುವದೇನಂದರೆ, ಅವನಿ ಗಿಂತಲೂ ಇನ್ನು ಹುಟ್ಟದಿರುವವನೇ ಉತ್ತಮ.

4ಅವನು ವ್ಯರ್ಥದಿಂದ ಬಂದು ಕತ್ತಲೆಯಲ್ಲಿ ಹೊರಟು ಹೋಗು ತ್ತಾನೆ; ಅವನ ಹೆಸರು ಕತ್ತಲೆಯಿಂದ ಮುಚ್ಚಲ್ಪಡುವದು.

5ಇದಲ್ಲದೆ ಅವನು ಸೂರ್ಯನನ್ನು ನೋಡಲಿಲ್ಲ, ಯಾವದನ್ನು ಅರಿತಿರಲಿಲ್ಲ; ಮತ್ತೊಬ್ಬನಿಗಿಂತ ಇದಕ್ಕೆ ಹೆಚ್ಚಿನ ವಿಶ್ರಾಂತಿ ಇದೆ.

6ಹೌದು, ಎರಡು ಸಾವಿರ ದಷ್ಟು ವರುಷಗಳು ಅವನು ಬದುಕಿದರೂ ಅವನು ಸುಖವನ್ನು ಅನುಭವಿಸಲಿಲ್ಲ; ಎಲ್ಲರೂ ಒಂದೇ ಸ್ಥಳಕ್ಕೆ ಹೋಗುತ್ತಾರಲ್ಲವೇ?

ಪ್ರಸಂಗಿ 6 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी