ಆಗ ಯೇಸು ಅವನ ಸಂಗಡ ಹೋದನು; ಮತ್ತು ಬಹಳ ಜನರು ನೂಕಾಡುತ್ತಾ ಆತನ ಹಿಂದೆ ಹೋದರು.
22ಆಗ ಇಗೋ, ಸಭಾಮಂದಿರದ ಅಧಿಕಾರಿ ಗಳಲ್ಲಿ ಯಾಯಿರನೆಂದು ಹೆಸರಿದ್ದ ಒಬ್ಬನು ಬಂದು ಆತನನ್ನು ಕಂಡು ಆತನ ಪಾದಗಳಿಗೆ ಬಿದ್ದು--
23ನನ್ನ ಚಿಕ್ಕಮಗಳು ಸಾಯುವ ಸ್ಥಿತಿಯಲ್ಲಿ ಮಲಗಿದ್ದಾಳೆ, ಅವಳು ಸ್ವಸ್ಥಳಾಗುವಂತೆ ನೀನು ಬಂದು ನಿನ್ನ ಕೈಗಳನ್ನು ಅವಳ ಮೇಲೆ ಇಡು; ಆಗ ಅವಳು ಬದುಕುವಳು ಎಂದು ಆತನನ್ನು ಬಹಳವಾಗಿ ಬೇಡಿಕೊಂಡನು.
24ಆಗ ಯೇಸು ಅವನ ಸಂಗಡ ಹೋದನು; ಮತ್ತು ಬಹಳ ಜನರು ನೂಕಾಡುತ್ತಾ ಆತನ ಹಿಂದೆ ಹೋದರು.
25ಆಗ ಹನ್ನೆರಡು ವರುಷಗಳಿಂದ ರಕ್ತಸ್ರಾವವಿದ್ದ ಒಬ್ಬ ಸ್ತ್ರೀಯು
26ಅನೇಕ ವೈದ್ಯರಿಂದ ಬಹು ಕಷ್ಟಗಳನ್ನು ಅನುಭವಿಸಿ ತನಗಿದ್ದದ್ದನ್ನೆಲ್ಲಾ ವೆಚ್ಚ ಮಾಡಿದ್ದಾಗ್ಯೂ ರೋಗವು ಹೆಚ್ಚಾಯಿತೇ ಹೊರತು ಗುಣವಾಗಲಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ