ಆದಿಕಾಂಡ 28:17

ಅವನು ಭಯಪಟ್ಟು--ಈ ಸ್ಥಳವು ಎಷ್ಟೋ ಭಯಂಕರ ವಾದದ್ದು; ಇದು ದೇವರ ಮನೆಯೇ ಹೊರತು ಬೇರೆಯಲ್ಲ; ಇದೇ ಪರಲೋಕದ ಬಾಗಿಲು ಅಂದನು.

ಸಂದರ್ಭದೊಂದಿಗೆ ಓದಿ · ಆದಿಕಾಂಡ 28

15ಇಗೋ, ನಾನು ನಿನ್ನ ಸಂಗಡ ಇದ್ದು ನೀನು ಹೋಗುವಲ್ಲೆಲ್ಲಾ ನಿನ್ನನ್ನು ಕಾಪಾಡಿ ಈ ದೇಶಕ್ಕೆ ನಿನ್ನನ್ನು ತಿರಿಗಿ ಬರಮಾಡುವೆನು. ಯಾಕಂದರೆ ನಾನು ನಿನಗೆ ಹೇಳಿದ್ದನ್ನು ಮಾಡುವ ವರೆಗೆ ನಿನ್ನನ್ನು ಬಿಡುವದಿಲ್ಲ ಅಂದನು.

16ತರುವಾಯ ಯಾಕೋಬನು ನಿದ್ರೆಯಿಂದ ಎಚ್ಚತ್ತು--ನಿಶ್ಚಯವಾಗಿ ಈ ಸ್ಥಳದಲ್ಲಿ ಕರ್ತನು ಇದ್ದಾನೆ. ಇದನ್ನು ನಾನು ಅರಿಯಲಿಲ್ಲ ಅಂದನು.

17ಅವನು ಭಯಪಟ್ಟು--ಈ ಸ್ಥಳವು ಎಷ್ಟೋ ಭಯಂಕರ ವಾದದ್ದು; ಇದು ದೇವರ ಮನೆಯೇ ಹೊರತು ಬೇರೆಯಲ್ಲ; ಇದೇ ಪರಲೋಕದ ಬಾಗಿಲು ಅಂದನು.

18ಯಾಕೋಬನು ಬೆಳಿಗ್ಗೆ ಎದ್ದು ತಾನು ತಲೆದಿಂಬಾಗಿ ಇಟ್ಟುಕೊಂಡಿದ್ದ ಕಲ್ಲನ್ನು ತೆಗೆದುಕೊಂಡು ಅದನ್ನು ಸ್ತಂಭವಾಗಿ ನೆಟ್ಟು ಅದರ ಮೇಲೆ ಎಣ್ಣೆಯನ್ನು ಹೊಯ್ದನು.

19ಇದಲ್ಲದೆ ಅವನು ಆ ಸ್ಥಳಕ್ಕೆ ಬೇತೇಲ್‌ ಎಂದು ಹೆಸರಿಟ್ಟನು. ಆದರೆ ಅದಕ್ಕಿಂತ ಮೊದಲು ಆ ಪಟ್ಟಣಕ್ಕೆ ಲೂಜ್‌ ಎಂದು ಹೆಸರಿತ್ತು.

ಆದಿಕಾಂಡ 28 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी