ಅರಣ್ಯದ ಸಕಲ ಮೃಗಗಳೇ, ಹೌದು, ಕಾಡಿನ ಎಲ್ಲಾ ಮೃಗಗಳೇ, ನುಂಗಿಬಿಡುವದಕ್ಕೆ ಬನ್ನಿರಿ.
7ನನ್ನ ಪರಿಶುದ್ಧ ಪರ್ವತಕ್ಕೆ ತರುತ್ತೇನೆ; ನನ್ನ ಪ್ರಾರ್ಥನೆಯ ಆಲಯದಲ್ಲಿ ಅವರಿಗೆ ಆನಂದವ ನ್ನುಂಟು ಮಾಡುವೆನು; ನನ್ನ ಯಜ್ಞವೇದಿಯ ಮೇಲೆ ಅವರು ಅರ್ಪಿಸುವ ದಹನಬಲಿಗಳೂ, ಯಜ್ಞಗಳೂ ನನಗೆ ಒಪ್ಪಿಗೆಯಾಗುವವು; ಯಾಕಂದರೆ ನನ್ನ ಆಲ ಯವು ಸಮಸ್ತ ಜನಗಳಿಗೆ ಪ್ರಾರ್ಥನಾಲಯವು ಎಂದು ಕರೆಯಲ್ಪಡುವದು.
8ಇಸ್ರಾಯೇಲಿನ ತಳ್ಳಲ್ಪ ಟ್ಟವರನ್ನು ಕೂಡಿಸುವಂಥ ಕರ್ತನಾದ ದೇವರು ಹೇಳುವದೇನಂದರೆ--ನಾನು ಕೂಡಿಸಿದ ಇಸ್ರಾ ಯೇಲ್ಯರೊಂದಿಗೆ ಇನ್ನು ಹಲವರನ್ನು ಕೂಡಿಸುವೆನು ಎಂದು ಹೇಳುತ್ತಾನೆ.
9ಅರಣ್ಯದ ಸಕಲ ಮೃಗಗಳೇ, ಹೌದು, ಕಾಡಿನ ಎಲ್ಲಾ ಮೃಗಗಳೇ, ನುಂಗಿಬಿಡುವದಕ್ಕೆ ಬನ್ನಿರಿ.
10ಅವನ ಕಾವಲುಗಾರರು ಕುರುಡರು, ಅವರೆಲ್ಲರೂ ತಿಳುವಳಿಕೆ ಯಿಲ್ಲದವರು; ಅವರೆಲ್ಲರೂ ಮೂಕ ನಾಯಿಗಳು; ಅವು ಬೊಗಳಲಾರವು, ನಿದ್ರಿಸುತ್ತವೆ, ಬಿದ್ದುಕೊಂಡಿ ರುತ್ತವೆ. ತೂಕಡಿಕೆಯನ್ನು ಪ್ರೀತಿಸುತ್ತವೆ.
11ಹೌದು, ಎಂದಿಗೂ ಸಾಕೆನ್ನದ ಹೊಟ್ಟೇಬಾಕ ನಾಯಿಗಳು, ಅವರು ಗ್ರಹಿಕೆಯಿಲ್ಲದ ಕುರುಬರು; ಅವರೆಲ್ಲರು ತಮ್ಮ ತಮ್ಮ ಸ್ವಂತ ಮಾರ್ಗಕ್ಕೂ ಪ್ರತಿಯೊಬ್ಬನು ತನಗೆ ಲಾಭ ಸಿಕ್ಕುವ ಕಡೆಗೂ ತಿರುಗಿ ಕೊಳ್ಳುವನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ