ನಿನ್ನ ಸೃಷ್ಟಿಯ ದಿನದಿಂದ ನಿನ್ನಲ್ಲಿ ಅಪರಾಧವು ಸಿಕ್ಕುವ ತನಕ ನಿನ್ನ ನಡತೆಯು ನಿರ್ದೋಷವಾಗಿ ಕಾಣುತ್ತಿತ್ತು.
13ದೇವರ ತೋಟ ವಾದ ಏದೆನಿನಲ್ಲಿ ನೀನಿದ್ದಿ. ಮಾಣಿಕ್ಯ, ಪುಷ್ಯರಾಗ, ಪಚ್ಚೆ, ಪೀತರತ್ನ, ವಜ್ರ, ವೈಡೂರ್ಯ, ನೀಲ ಗೋಮೇ ಧಿಕ, ಕೆಂಪು, ಸ್ಪಟಿಕ, ಚಿನ್ನ ಈ ಅಮೂಲ್ಯವಾದವು ಗಳಿಂದ ಭೂಷಿತವಾಗಿದ್ದಿ. ನಿನ್ನಲ್ಲಿದ್ದ ದಮ್ಮಡಿಗಳೂ ಕೊಳಲುಗಳೂ ಇವುಗಳ ಕೆಲಸವು ನಿನ್ನಲ್ಲಿದ್ದು ನಿನ್ನ ಸೃಷ್ಟಿಯ ದಿನದಲ್ಲಿ ಸಿದ್ಧವಾದವು.
14ನೀನೇ ಮುಚ್ಚು ವಂತ ಅಭಿಷೇಕಿಸಲ್ಪಟ್ಟ ಕೆರೂಬಿಯು ದೇವರ ಪರಿಶುದ್ಧ ಪರ್ವತದಲ್ಲಿ ನಿನ್ನನ್ನು ಇಟ್ಟೆನು; ಅಲ್ಲೇ ನೀನಿದ್ದಿ, ಬೆಂಕಿಯ ಕಲ್ಲುಗಳ, ಮಧ್ಯದಲ್ಲಿ ನೀನು ಕೆಳಗೂ ಮೇಲಕ್ಕೂ ತಿರುಗಾಡಿದಿ.
15ನಿನ್ನ ಸೃಷ್ಟಿಯ ದಿನದಿಂದ ನಿನ್ನಲ್ಲಿ ಅಪರಾಧವು ಸಿಕ್ಕುವ ತನಕ ನಿನ್ನ ನಡತೆಯು ನಿರ್ದೋಷವಾಗಿ ಕಾಣುತ್ತಿತ್ತು.
16ನಿನ್ನ ಮಿತಿಯಿಲ್ಲದ ವ್ಯಾಪಾರದಿಂದ ನಿನ್ನಲ್ಲಿ ಬಲಾತ್ಕಾರವು ತುಂಬಿ ನೀನು ಪಾಪಿಯಾದಿ; ಆದದರಿಂದ ನಿನ್ನನ್ನು ಅಪವಿತ್ರನೆಂದು ದೇವರ ಪರ್ವತದೊಳಗಿನಿಂದ ನಾನು ಬಿಸಾಡುವೆನು. ಓ ಮುಚ್ಚುವ ಕೆರೂಬಿಯೇ, ಬೆಂಕಿಯ ಕಲ್ಲುಗಳ ಮಧ್ಯದಿಂದ ನಿನ್ನನ್ನು ನಾಶಮಾಡುವೆನು.
17ನಿನ್ನ ಸೌಂದರ್ಯದ ನಿಮಿತ್ತ ನಿನ್ನ ಹೃದಯವು ಉಬ್ಬಿ ಕೊಂಡಿತು; ನಿನ್ನ ಪ್ರಕಾಶದ ನಿಮಿತ್ತ ನಿನ್ನ ಜ್ಞಾನವನ್ನು ಕೆಡಿಸಿಕೊಂಡಿ; ನಾನು ನಿನ್ನನ್ನು ನೆಲಕ್ಕೆ ಹಾಕುವೆನು. ಅರಸನ ಮುಂದೆ ಅವರು ನೋಡುವ ಹಾಗೆ ನಿನ್ನನ್ನು ಇಡುತ್ತೇನೆ;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ