ಅರಣ್ಯಕಾಂಡ 22:5

ಇವನು ತನ್ನ ಜನರ ಮಕ್ಕಳ ದೇಶದ ನದಿತೀರದಲ್ಲಿರುವ ಪೆತೋರಿಗೆ ದೂತರನ್ನು ಕಳುಹಿಸಿ ಬೆಯೋರನ ಮಗನಾದ ಬಿಳಾಮನನ್ನು ಕರೆಯಿಸಿ ಹೇಳಿದ್ದೇನಂದರೆ--ಇಗೋ, ಒಂದು ಜನಾಂಗವು ಐಗುಪ್ತದಿಂದ ಹೊರಟಿತು; ಇಗೋ, ಅದು ಭೂಮುಖವನ್ನು ಮುಚ್ಚಿ ನನಗೆದುರಾಗಿ ವಾಸಿಸುತ್ತದೆ.

ಸಂದರ್ಭದೊಂದಿಗೆ ಓದಿ · ಅರಣ್ಯಕಾಂಡ 22

3ಆ ಜನರು ಬಹುಮಂದಿಯಾದದರಿಂದ ಮೋವಾಬಿನವರು ಅವರಿಗೆ ಬಹಳವಾಗಿ ಅಂಜಿದರು; ಮೋವಾಬಿ ನವರು ಇಸ್ರಾಯೇಲ್‌ ಮಕ್ಕಳನ್ನು ಕಂಡು ದಿಗಿಲು ಪಟ್ಟರು.

4ಆದದರಿಂದ ಮೋವಾಬ್ಯರು ಮಿದ್ಯಾನ್ಯರ ಹಿರಿಯರಿಗೆ ಹೇಳಿದ್ದೇನಂದರೆ--ಈಗ ಈ ಸಮೂಹವು ನಮ್ಮ ಸುತ್ತಲಿರುವದನ್ನೆಲ್ಲಾ ಎತ್ತು ಅಡವಿಯ ಹುಲ್ಲನ್ನು ಮೇಯುವಂತೆ ಮೇಯುವದು. ಆ ಕಾಲದಲ್ಲಿ ಚಿಪ್ಪೋ ರನ ಮಗನಾದ ಬಾಲಾಕನು ಮೋವಾಬ್ಯರ ಅರಸ ನಾಗಿದ್ದನು.

5ಇವನು ತನ್ನ ಜನರ ಮಕ್ಕಳ ದೇಶದ ನದಿತೀರದಲ್ಲಿರುವ ಪೆತೋರಿಗೆ ದೂತರನ್ನು ಕಳುಹಿಸಿ ಬೆಯೋರನ ಮಗನಾದ ಬಿಳಾಮನನ್ನು ಕರೆಯಿಸಿ ಹೇಳಿದ್ದೇನಂದರೆ--ಇಗೋ, ಒಂದು ಜನಾಂಗವು ಐಗುಪ್ತದಿಂದ ಹೊರಟಿತು; ಇಗೋ, ಅದು ಭೂಮುಖವನ್ನು ಮುಚ್ಚಿ ನನಗೆದುರಾಗಿ ವಾಸಿಸುತ್ತದೆ.

6ಈಗ ನೀನು ದಯಮಾಡಿ ಬಂದು ಈ ಜನವನ್ನು ನನಗಾಗಿ ಶಪಿಸು; ಅವರು ನನಗಿಂತ ಬಲಿಷ್ಠರಾಗಿದ್ದಾರೆ. ಒಂದು ವೇಳೆ ನಾನು ಗೆದ್ದೇನು, ನಾವು ಅವರನ್ನು ಹೊಡೆದೇವು; ನಾನು ಅವರನ್ನು ದೇಶದೊಳಗಿಂದ ಹೊರಡಿಸೇನು; ನೀನು ಯಾವನನ್ನು ಆಶೀರ್ವದಿಸು ತ್ತೀಯೋ ಅವನು ಆಶೀರ್ವದಿಸಲ್ಪಟ್ಟವನೇ; ನೀನು ಯಾವನನ್ನು ಶಪಿಸುತ್ತೀಯೋ ಅವನು ಶಪಿಸಲ್ಪಟ್ಟವನೇ ಎಂದು ನಾನು ಬಲ್ಲೆನು.

7ಆಗ ಮೋವಾಬಿನ ಹಿರಿಯರೂ ಮಿದ್ಯಾನಿನ ಹಿರಿಯರೂ ಕಣಿ ಕೇಳುವದಕ್ಕಾಗಿ ತಮ್ಮ ಕೈಯಲ್ಲಿ ಕಾಣಿಕೆ ಗಳನ್ನು ತಕ್ಕೊಂಡು ಹೋದರು; ಅವರು ಬಿಳಾಮನ ಬಳಿಗೆ ಬಂದು ಅವನಿಗೆ ಬಾಲಾಕನ ಮಾತುಗಳನ್ನು ಹೇಳಿದರು.

ಅರಣ್ಯಕಾಂಡ 22 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी