ವಿಮೋಚನಕಾಂಡ 35:20

ಆಗ ಇಸ್ರಾಯೇಲ್‌ ಮಕ್ಕಳ ಸಭೆಯವರೆಲ್ಲರೂ ಮೋಶೆಯ ಎದುರಿನಿಂದ ಹೊರಟುಹೋದರು.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 35

18ಗುಡಾರದ ಗೂಟಗಳನ್ನೂ ಅಂಗಳದ ಗೂಟಗಳನ್ನೂ ಅವುಗಳ ಹಗ್ಗಗಳನ್ನೂ

19ಪರಿಶುದ್ಧ ಸ್ಥಳದಲ್ಲಿ ಸೇವೆಮಾಡುವದ ಕ್ಕಾಗಿ ಸೇವೆಯ ವಸ್ತ್ರಗಳನ್ನೂ ಯಾಜಕನಾದ ಆರೋನನ ಪರಿಶುದ್ಧ ವಸ್ತ್ರಗಳನ್ನೂ ಯಾಜಕ ಸೇವೆಗೋಸ್ಕರ ಅವನ ಕುಮಾರರ ವಸ್ತ್ರಗಳನ್ನೂ ಮಾಡಲಿ ಅಂದನು.

20ಆಗ ಇಸ್ರಾಯೇಲ್‌ ಮಕ್ಕಳ ಸಭೆಯವರೆಲ್ಲರೂ ಮೋಶೆಯ ಎದುರಿನಿಂದ ಹೊರಟುಹೋದರು.

21ಅವರಲ್ಲಿ ಪ್ರತಿಯೊಬ್ಬನು ಹೃದಯ ಪ್ರೇರಣೆಯಿಂದ ಮತ್ತು ಪ್ರತಿಯೊಬ್ಬನು ತನ್ನ ಮನಸ್ಸು ಇಷ್ಟಪಡುವಂತೆ ಸಭೆಯ ಗುಡಾರದ ಕೆಲಸಕ್ಕಾಗಿಯೂ ಅದರ ಎಲ್ಲಾ ಸೇವೆಗಾಗಿಯೂ ಪರಿಶುದ್ಧ ವಸ್ತ್ರಗಳಿಗಾಗಿಯೂ ಕರ್ತನಿಗೆ ಕಾಣಿಕೆಗಳನ್ನು ತೆಗೆದುಕೊಂಡು ಬಂದರು.

22ಸ್ತ್ರೀಪುರುಷರೆಲ್ಲರೂ ಮನಃಪೂರ್ವಕವಾಗಿ ಬಂದು ಬಳೆಗಳನ್ನೂ ಮುರುವುಗಳನ್ನೂ ಉಂಗುರಗಳನ್ನೂ ಮುದ್ರೆಗಳನ್ನೂ ಚಿನ್ನದ ಎಲ್ಲಾ ಒಡವೆಗಳನ್ನೂ ತಂದರು. ಪ್ರತಿಯೊಬ್ಬನೂ ಚಿನ್ನದ ಕಾಣಿಕೆಯನ್ನು ಕರ್ತನಿಗೆ ಅರ್ಪಿಸಿದನು.

ವಿಮೋಚನಕಾಂಡ 35 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी