ಆದದರಿಂದ ನೀವು ನಿಮ್ಮ ದೇವರಾದ ಕರ್ತನನ್ನು ಪ್ರೀತಿಮಾಡುವ ಹಾಗೆ ನೀವು ಬಹಳ ಎಚ್ಚರಿಕೆಯಾಗಿರ್ರಿ.
9ಕರ್ತನು ನಿಮ್ಮ ಮುಂದೆ ಬಲವಾದ ದೊಡ್ಡ ಜನಾಂಗಗಳನ್ನು ಹೊರಡಿಸಿಬಿಟ್ಟನು. ಆದರೆ ನಿಮ್ಮ ಮುಂದೆ ಈ ವರೆಗೂ ಒಬ್ಬರಾದರೂ ನಿಲ್ಲಲಾರದೆ ಹೋದರು.
10ನಿಮ್ಮಲ್ಲಿ ಇರುವ ಒಬ್ಬನು ಸಾವಿರ ಮಂದಿಯನ್ನು ಹಿಂದಟ್ಟುವನು. ನಿಮ್ಮ ದೇವರಾದ ಕರ್ತನು ನಿಮಗೆ ವಾಗ್ದಾನಮಾಡಿದ ಹಾಗೆ ಆತನೇ ನಿಮಗೋಸ್ಕರ ಯುದ್ಧಮಾಡುತ್ತಾನೆ.
11ಆದದರಿಂದ ನೀವು ನಿಮ್ಮ ದೇವರಾದ ಕರ್ತನನ್ನು ಪ್ರೀತಿಮಾಡುವ ಹಾಗೆ ನೀವು ಬಹಳ ಎಚ್ಚರಿಕೆಯಾಗಿರ್ರಿ.
12ನೀವು ಹಿಂತಿರಿಗಿ ಕೊಂಡು ನಿಮ್ಮಲ್ಲಿ ಉಳಿದಿರುವ ಈ ಜನಾಂಗ ಗಳಲ್ಲಿ ಸೇರಿಕೊಂಡು ಅವರಿಗೆ ಮದುವೆಮಾಡಿ ಕೊಟ್ಟರೆ ನೀವು ಅವರ ಬಳಿಗೂ ಅವರು ನಿಮ್ಮ ಬಳಿಗೂ ಪ್ರವೇಶಿಸಿದರೆ
13ನಿಮ್ಮ ದೇವರಾದ ಕರ್ತನು ಇನ್ನು ಮೇಲೆ ಈ ಜನಾಂಗಗಳನ್ನು ನಿಮ್ಮ ಮುಂದೆ ಹೊರಡಿಸಿ ಬಿಡುವದಿಲ್ಲ. ನಿಮ್ಮ ದೇವರಾದ ಕರ್ತನು ನಿಮಗೆ ಕೊಟ್ಟ ಈ ಒಳ್ಳೇ ದೇಶದೊಳಗಿಂದ ನೀವು ನಾಶವಾಗುವ ವರೆಗೂ ಅವರು ನಿಮಗೆ ಉರುಲಾಗಿಯೂ ಬೋನಾ ಗಿಯೂ ನಿಮ್ಮ ಪಕ್ಕೆಯಲ್ಲಿ ಶೂಲವಾಗಿಯೂ ನಿಮ್ಮ ಕಣ್ಣುಗಳಿಗೆ ಮುಳ್ಳುಗಳಾಗಿಯೂ ಇರುವರೆಂದು ನಿಶ್ಚಯ ವಾಗಿ ತಿಳಿದುಕೊಳ್ಳುವಿರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ