ಜೆಕರ್ಯ 14:10

ದೇಶವೆಲ್ಲಾ ಗೆಬ ಮೊದಲುಗೊಂಡು ಯೆರೂಸ ಲೇಮಿನ ದಕ್ಷಿಣದಲ್ಲಿರುವ ರಿಮ್ಮೋನಿನ ವರೆಗೂ ಬೈಲಿನ ಹಾಗೆ ಮಾರ್ಪಡುವದು; ಅದು ಎತ್ತಲ್ಪಟ್ಟು ತನ್ನ ಸ್ಥಳ ದಲ್ಲಿ ಬೆನ್ಯಾವಿಾನನ ಬಾಗಲು ಮೊದಲುಗೊಂಡು ಮೊದಲನೇ ಬಾಗಲಿನ ಸ್ಥಳದ ವರೆಗೂ ಮೂಲೆ ಬಾಗಲಿನ ವರೆಗೂ ಹನನೇಲನ ಗೋಪುರ ಮೊದಲು ಗೊಂಡು ಅರಸನ ದ್ರಾಕ್ಷೇ ಅಲೆಗಳ ವರೆಗೂ ನಿವಾಸ ವಾಗುವದು.

ಸಂದರ್ಭದೊಂದಿಗೆ ಓದಿ · ಜೆಕರ್ಯ 14

8ಆ ದಿನದಲ್ಲಿ ಆಗುವದೇನಂದರೆ, ಯೆರೂಸಲೇಮಿ ನೊಳಗಿದ್ದ ಜೀವಜಲಗಳು ಹೊರಡುವವು; ಅವುಗ ಳಲ್ಲಿ ಅರ್ಧ ಪೂರ್ವ ಸಮುದ್ರಕ್ಕೆ ಅರ್ಧ ಪಶ್ಚಿಮ ಸಮುದ್ರಕ್ಕೆ ಹೋಗುವವು; ಅದು ಬೇಸಿಗೆ ಕಾಲ ದಲ್ಲಿಯೂ ಚಳಿಗಾಲದಲ್ಲಿಯೂ ಇರುವದು.

9ಕರ್ತನು ಭೂಮಿಗೆಲ್ಲಾ ಅರಸನಾಗಿರುವನು; ಆ ದಿನದಲ್ಲಿ ಕರ್ತನು ಒಬ್ಬನೇ ಇರುವನು; ಆತನ ಹೆಸರು ಒಂದೇ.

10ದೇಶವೆಲ್ಲಾ ಗೆಬ ಮೊದಲುಗೊಂಡು ಯೆರೂಸ ಲೇಮಿನ ದಕ್ಷಿಣದಲ್ಲಿರುವ ರಿಮ್ಮೋನಿನ ವರೆಗೂ ಬೈಲಿನ ಹಾಗೆ ಮಾರ್ಪಡುವದು; ಅದು ಎತ್ತಲ್ಪಟ್ಟು ತನ್ನ ಸ್ಥಳ ದಲ್ಲಿ ಬೆನ್ಯಾವಿಾನನ ಬಾಗಲು ಮೊದಲುಗೊಂಡು ಮೊದಲನೇ ಬಾಗಲಿನ ಸ್ಥಳದ ವರೆಗೂ ಮೂಲೆ ಬಾಗಲಿನ ವರೆಗೂ ಹನನೇಲನ ಗೋಪುರ ಮೊದಲು ಗೊಂಡು ಅರಸನ ದ್ರಾಕ್ಷೇ ಅಲೆಗಳ ವರೆಗೂ ನಿವಾಸ ವಾಗುವದು.

11ಅದರಲ್ಲಿ ಜನರು ವಾಸವಾಗಿರುವರು; ಅಲ್ಲಿ ಇನ್ನು ಮೇಲೆ ಸಂಪೂರ್ಣವಾದ ನಾಶವಿರದು; ಆದರೆ ಯೆರೂಸಲೇಮು ಭದ್ರವಾಗಿ ವಾಸಿಸುವದು.

12ಯೆರೂಸಲೇಮಿಗೆ ವಿರೋಧವಾಗಿ ದಂಡುಕಟ್ಟಿ ಕೊಂಡಿರುವ ಎಲ್ಲಾ ಜನಗಳನ್ನು ಕರ್ತನು ವ್ಯಾಧಿ ಯಿಂದ ಬಾಧಿಸುವನು; ಹೀಗೆಯೇ ಅವರು ಕಾಲಿನ ಮೇಲೆ ನಿಲ್ಲುವಾಗ ಅವರ ಶರೀರವು ಕ್ಷಯಿಸಿಹೋಗು ವದು; ಅವರ ಕಣ್ಣುಗಳು ಗುಣಿಗಳಲ್ಲಿ ಇಂಗಿಹೋಗು ವವು; ಅವರ ನಾಲಿಗೆ ಅವರ ಬಾಯಲ್ಲಿ ಕ್ಷಯಿಸಿ ಹೋಗುವದು.

ಜೆಕರ್ಯ 14 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी