ಯೆಹೋಶುವ 13:29

ಇದಲ್ಲದೆ ಮನೆಸ್ಸೆಯ ಮಕ್ಕಳ ಅರ್ಧಗೋತ್ರಕ್ಕೆ ಮೋಶೆಯು ಅವರ ಕುಟುಂಬದ ಪ್ರಕಾರ ಸ್ವಾಸ್ತ್ಯವನ್ನು ಕೊಟ್ಟನು.

ಸಂದರ್ಭದೊಂದಿಗೆ ಓದಿ · ಯೆಹೋಶುವ 13

27ತಗ್ಗಿನಲ್ಲಿರುವ ಬೇತ್‌ಹಾರಾಮ್‌; ಬೇತ್‌ನಿಮ್ರಾ, ಸುಕ್ಕೋತ್‌, ಚಾಫೋನ್‌; ಹೆಷ್ಬೋನಿನ ಅರಸನಾದ ಸೀಹೋನನ ಉಳಿದ ರಾಜ್ಯವೂ ಯೊರ್ದನಿಗೆ ಆಚೆಯಲ್ಲಿರುವ ಮೂಡಲ ಯೊರ್ದನಿನ ತೀರವಾಗಿ ಕಿನ್ನೆರೆತ್‌ ಸಮುದ್ರದ ಪರ್ಯಂತರಕ್ಕೂ ಇರುವ ದೇಶವೂ ಅವರ ಮೇರೆಗೆ ಒಳಗಾದವು.

28ಈ ಪಟ್ಟಣಗಳೂ ಇವುಗಳ ಗ್ರಾಮಗಳೂ ಗಾದನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಬಾಧ್ಯತೆಯಾಗಿವೆ.

29ಇದಲ್ಲದೆ ಮನೆಸ್ಸೆಯ ಮಕ್ಕಳ ಅರ್ಧಗೋತ್ರಕ್ಕೆ ಮೋಶೆಯು ಅವರ ಕುಟುಂಬದ ಪ್ರಕಾರ ಸ್ವಾಸ್ತ್ಯವನ್ನು ಕೊಟ್ಟನು.

30ಅದು ಯಾವದಂದರೆ, ಮಹನಯಾಮಿ ನಿಂದ ಬಾಷಾನಿನ ಅರಸನಾದ ಓಗನ ಸಮಸ್ತ ರಾಜ್ಯವಾಗಿರುವ ಬಾಷಾನೆಲ್ಲವೂ ಬಾಷಾನಿನಲ್ಲಿರುವ ಯಾಯಾರಿನ ಸಮಸ್ತ ಊರುಗಳಾದ ಅರವತ್ತು ಪಟ್ಟಣಗಳೂ ಅವರ ಮೇರೆಗೆ ಒಳಗಾದವು.

31ಗಿಲ್ಯಾದಿ ನಲ್ಲಿ ಅರ್ಧವನ್ನೂ ಬಾಷಾನಿನಲ್ಲಿ ಅಷ್ಟರೋತ್‌, ಎದ್ರೈ ಎಂಬ ಓಗನ ರಾಜ್ಯದ ಪಟ್ಟಣಗಳನ್ನೂ ಮನಸ್ಸೆಯ ಮಗನಾದ ಮಾಕೀರನ ಮಕ್ಕಳಿಗೆ, ಅವರ ಕುಟುಂಬಗಳ ಪ್ರಕಾರ ಮಾಕೀರನ ಮಕ್ಕಳಲ್ಲಿ ಅರ್ಧ ಜನಕ್ಕೆ ಕೊಟ್ಟನು.

ಯೆಹೋಶುವ 13 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी