ನಾನು ಬಂದು ಅವರಿಗೆ ಹೇಳದಿದ್ದರೆ ಅವರಲ್ಲಿ ಪಾಪವು ಇರುತ್ತಿದ್ದಿಲ್ಲ; ಆದರೆ ಈಗ ಅವರ ಪಾಪಕ್ಕೆ ನೆವವಿಲ್ಲ.
20ತನ್ನ ದಣಿಗಿಂತ ಆಳು ದೊಡ್ಡವನಲ್ಲ ಎಂದು ನಾನು ನಿಮಗೆ ಹೇಳಿದ ಮಾತನ್ನು ಜ್ಞಾಪಕಮಾಡಿಕೊಳ್ಳಿರಿ; ಅವರು ನನ್ನನ್ನು ಹಿಂಸಿಸಿದರೆ ನಿಮ್ಮನ್ನು ಸಹ ಹಿಂಸಿಸುವರು. ಅವರು ನನ್ನ ಮಾತನ್ನು ಕೈ ಕೊಂಡಿದ್ದರೆ ನಿಮ್ಮ ಮಾತನ್ನು ಸಹ ಕೈಕೊಳ್ಳುವರು.
21ಆದರೆ ಅವರು ನನ್ನನ್ನು ಕಳುಹಿಸಿದಾತನನ್ನು ತಿಳಿಯದಿರುವದರಿಂದ ನನ್ನ ಹೆಸ ರಿನ ನಿಮಿತ್ತ ಇವುಗಳನ್ನೆಲ್ಲಾ ನಿಮಗೆ ಮಾಡುವರು.
22ನಾನು ಬಂದು ಅವರಿಗೆ ಹೇಳದಿದ್ದರೆ ಅವರಲ್ಲಿ ಪಾಪವು ಇರುತ್ತಿದ್ದಿಲ್ಲ; ಆದರೆ ಈಗ ಅವರ ಪಾಪಕ್ಕೆ ನೆವವಿಲ್ಲ.
23ನನ್ನನ್ನು ದ್ವೇಷಮಾಡುವವನು ನನ್ನ ತಂದೆಯನ್ನು ಸಹ ದ್ವೇಷಮಾಡುತ್ತಾನೆ.
24ಬೇರೆ ಯಾರೂ ಮಾಡದಿರುವ ಕ್ರಿಯೆಗಳನ್ನು ನಾನು ಅವರೊಳಗೆ ಮಾಡದಿದ್ದರೆ ಅವರಿಗೆ ಪಾಪವು ಇರು ತ್ತಿರಲಿಲ್ಲ; ಆದರೆ ಈಗ ಅವರು ನನ್ನನ್ನು ಮತ್ತು ನನ್ನ ತಂದೆಯನ್ನು ನೋಡಿ ದ್ವೇಷಮಾಡಿದ್ದಾರೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ