೧ ಸಮುವೇಲನು 6:2

ಫಿಲಿಷ್ಟಿಯರು ಪೂಜಾರಿಗಳನ್ನೂ ಕಣಿ ಹೇಳುವ ವರನ್ನೂ ಕರಿಸಿ ಕರ್ತನ ಮಂಜೂಷವನ್ನು ನಾವೇನು ಮಾಡಬೇಕು? ನಾವು ಅದನ್ನು ಹೇಗೆ ಅದರ ಸ್ಥಳಕ್ಕೆ ಕಳುಹಿಸುವದು ನಮಗೆ ತಿಳಿಸಿರಿ ಅಂದರು.

ಸಂದರ್ಭದೊಂದಿಗೆ ಓದಿ · ೧ ಸಮುವೇಲನು 6

1ಆದರೆ ಕರ್ತನ ಮಂಜೂಷವು ಫಿಲಿಷ್ಟಿ ಯರ ಸೀಮೆಯಲ್ಲಿ ಏಳು ತಿಂಗಳು ಇತ್ತು.

2ಫಿಲಿಷ್ಟಿಯರು ಪೂಜಾರಿಗಳನ್ನೂ ಕಣಿ ಹೇಳುವ ವರನ್ನೂ ಕರಿಸಿ ಕರ್ತನ ಮಂಜೂಷವನ್ನು ನಾವೇನು ಮಾಡಬೇಕು? ನಾವು ಅದನ್ನು ಹೇಗೆ ಅದರ ಸ್ಥಳಕ್ಕೆ ಕಳುಹಿಸುವದು ನಮಗೆ ತಿಳಿಸಿರಿ ಅಂದರು.

3ಅದಕ್ಕವ ರು--ಇಸ್ರಾಯೇಲ್‌ ದೇವರ ಮಂಜೂಷವನ್ನು ನೀವು ಕಳುಹಿಸಬೇಕಾದರೆ ಅದನ್ನು ಬರಿದಾಗಿ ಕಳುಹಿಸದೆ ಅದರ ಸಂಗಡ ನಿಶ್ಚಯವಾಗಿ ಅಪರಾಧ ಕಾಣಿಕೆಯನ್ನು ಕಳುಹಿಸಿರಿ; ಆಗ ನೀವು ಸ್ವಸ್ಥ ಮಾಡಲ್ಪಡುವಿರಿ. ಆತನ ಕೈ ನಿಮ್ಮನ್ನು ಬಿಟ್ಟು ಹೋಗದೆ ಇರುವ ಕಾರಣ ನಿಮಗೆ ತಿಳಿಯಲ್ಪಡುವದು ಅಂದರು.

4ಆಗ ಅವರು--ಅಪ ರಾಧ ಕಾಣಿಕೆಯಾಗಿ ನಾವು ಅದರ ಸಂಗಡ ಕಳುಹಿಸ ತಕ್ಕದ್ದೇನು ಅಂದರು. ಅದಕ್ಕವರು--ಫಿಲಿಷ್ಟಿಯರ ಅಧಿ ಪತಿಗಳ ಲೆಕ್ಕಕ್ಕೆ ಸರಿಯಾಗಿ ಒಬ್ಬೊಬ್ಬರಿಗೆ ಗಡ್ಡೆವ್ಯಾಧಿಯ ವಿಧವಾದ ಐದು ಬಂಗಾರದ ಗಡ್ಡೆಗಳನ್ನೂ ಬಂಗಾರದ ಐದು ಇಲಿಗಳನ್ನೂ ಕಳುಹಿಸಿರಿ; ಯಾಕಂದರೆ ನಿಮ್ಮೆ ಲ್ಲರಿಗೂ ನಿಮ್ಮ ಅಧಿಪತಿಗಳಿಗೂ ಒಂದೇ ತರವಾದ ವ್ಯಾಧಿಯು ಅದೆ.

೧ ಸಮುವೇಲನು 6 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी