ಲೂಕನು 15:10

ಅದೇ ಪ್ರಕಾರ ಮಾನಸಾಂತರಪಡುವ ಒಬ್ಬ ಪಾಪಿಯ ವಿಷಯವಾಗಿ ದೇವದೂತರ ಮುಂದೆ ಸಂತೋಷವಾಗುವದೆಂದು ನಾನು ನಿಮಗೆ ಹೇಳುತ್ತೇನೆ ಅಂದನು.

ಸಂದರ್ಭದೊಂದಿಗೆ ಓದಿ · ಲೂಕನು 15

8ಯಾವ ಸ್ತ್ರೀಯು ತನ್ನಲ್ಲಿ ಹತ್ತು ಬೆಳ್ಳಿಯ ನಾಣ್ಯಗಳಿರಲಾಗಿ ಒಂದು ನಾಣ್ಯವನ್ನು ಕಳೆದುಕೊಂಡರೆ ದೀಪಹಚ್ಚಿ ಮನೆಯನ್ನು ಗುಡಿಸಿ ಅವಳು ಅದನ್ನು ಕಂಡುಕೊಳ್ಳುವ ವರೆಗೆ ಜಾಗ್ರತೆಯಿಂದ ಹುಡುಕುವ ದಿಲ್ಲವೇ?

9ಅವಳು ಅದನ್ನು ಕಂಡುಕೊಂಡ ಮೇಲೆ ತನ್ನ ಸ್ನೇಹಿತರನ್ನೂ ನೆರೆಯವರನ್ನೂ ಒಟ್ಟಾಗಿ ಕರೆದು ಅವರಿಗೆ--ನನ್ನ ಸಂಗಡ ಸಂತೋಷಪಡಿರಿ; ಯಾಕಂ ದರೆ ನಾನು ಕಳಕೊಂಡಿದ್ದ ನಾಣ್ಯವನ್ನು ಕಂಡುಕೊಂಡೆನು ಅನ್ನುವಳು.

10ಅದೇ ಪ್ರಕಾರ ಮಾನಸಾಂತರಪಡುವ ಒಬ್ಬ ಪಾಪಿಯ ವಿಷಯವಾಗಿ ದೇವದೂತರ ಮುಂದೆ ಸಂತೋಷವಾಗುವದೆಂದು ನಾನು ನಿಮಗೆ ಹೇಳುತ್ತೇನೆ ಅಂದನು.

11ಆತನು--ಒಬ್ಬಾನೊಬ್ಬ ಮನುಷ್ಯನಿಗೆ ಇಬ್ಬರು ಕುಮಾರರಿದ್ದರು.

12ಅವರಲ್ಲಿ ಕಿರಿಯವನು ತನ್ನ ತಂದೆಗೆ--ಅಪ್ಪಾ, ಆಸ್ತಿಯಲ್ಲಿ ನನಗೆ ಬರತಕ್ಕ ಪಾಲನ್ನು ಕೊಡು ಅಂದನು; ಆಗ ಅವನು ತನ್ನ ಬದುಕನ್ನು ಅವರಿಗೆ ವಿಭಾಗಿಸಿದನು.

ಲೂಕನು 15 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी