ಯೋಹಾನನು 3:4

ನಿಕೊದೇಮನು ಆತನಿಗೆ--ಒಬ್ಬನು ಮುದುಕನಾದ ಮೇಲೆ ಹುಟ್ಟುವದು ಹೇಗೆ? ಅವನು ತನ್ನ ತಾಯಿಯ ಗರ್ಭದಲ್ಲಿ ಎರಡನೆಯ ಸಾರಿ ಪ್ರವೇಶಿಸಿ ಹುಟ್ಟುವದಾದೀತೇ ಎಂದು ಕೇಳಿದನು.

ಸಂದರ್ಭದೊಂದಿಗೆ ಓದಿ · ಯೋಹಾನನು 3

2ಇವನು ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದು ಆತನಿಗೆ--ರಬ್ಬಿಯೇ (ಗುರುವು), ನೀನು ದೇವರ ಬಳಿಯಿಂದ ಬಂದ ಬೋಧಕನೆಂದು ನಾವು ಬಲ್ಲೆವು, ಯಾಕಂದರೆ ದೇವರು ಒಬ್ಬನ ಕೂಡ ಇಲ್ಲದ ಹೊರತು ನೀನು ಮಾಡುವ ಅದ್ಭುತಕಾರ್ಯಗಳನ್ನು ಯಾವ ಮನುಷ್ಯನೂ ಮಾಡಲಾರನು ಅಂದನು.

3ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ತಿರಿಗಿ ಹುಟ್ಟದಿದ್ದರೆ ಅವನು ದೇವರ ರಾಜ್ಯವನ್ನು ನೋಡಲಾರನು ಅಂದನು.

4ನಿಕೊದೇಮನು ಆತನಿಗೆ--ಒಬ್ಬನು ಮುದುಕನಾದ ಮೇಲೆ ಹುಟ್ಟುವದು ಹೇಗೆ? ಅವನು ತನ್ನ ತಾಯಿಯ ಗರ್ಭದಲ್ಲಿ ಎರಡನೆಯ ಸಾರಿ ಪ್ರವೇಶಿಸಿ ಹುಟ್ಟುವದಾದೀತೇ ಎಂದು ಕೇಳಿದನು.

5ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಿನಗೆ ನಿಜನಿಜ ವಾಗಿ ಹೇಳುತ್ತೇನೆ, ಒಬ್ಬನು ನೀರಿನಿಂದಲೂ ಆತ್ಮ ನಿಂದಲೂ ಹುಟ್ಟದಿದ್ದರೆ ಅವನು ದೇವರ ರಾಜ್ಯದೊಳಗೆ ಪ್ರವೇಶಿಸಲಾರನು.

6ಶರೀರದಿಂದ ಹುಟ್ಟಿದ್ದು ಶರೀ ರವೇ; ಆತ್ಮನಿಂದ ಹುಟ್ಟಿದ್ದು ಆತ್ಮವೇ.

ಯೋಹಾನನು 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी